ಕಲುಷಿತ ನೀರು ಕುಡಿದು ಮಹಿಳೆ ಸೇರಿ ಇಬ್ಬರು ಮೃತಪಟ್ಟ ಪ್ರಕರಣದ ಕುರಿತು ತನಿಖೆಗೆ ಆದೇಶ

3 years ago

#inquiry #ordered #death #people #woman #drinking #contaminated #water

ಬೆಂಗಳೂರು: ಚಿತ್ರದುರ್ಗದ  ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಮಹಿಳೆ ಸೇರಿ ಇಬ್ಬರು ಮೃತಪಟ್ಟು ಹಲವರು ಅಸ್ವಸ್ಥರಾಗಿರುವ ಘಟನೆ ಕುರಿತಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಘಟನೆ ಕುರಿತಂತೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆಗೆ ಆದೇಶಿಸಿದ್ದು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಈ ತಂಡ ಸ್ಥಳ ಪರಿಶೀಲನೆ ಮಾಡಿ ಮೂರು ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಸೇರಿ ಅನೇಕರು ತನಿಖಾ ತಂಡದಲ್ಲಿದ್ದಾರೆ. ಘಟನೆಯ ಕುರಿತು ವಿಶ್ಲೇಷಣೆ ಮಾಡಿ ತುರ್ತು ತನಿಖಾ ವರದಿಯನ್ನು ನೀಡಲಿದ್ದಾರೆ. ಇದರ ಆಧಾರದ ಮೇರೆಗೆ ತಪ್ಪಿತಸ್ಥರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

Leave a Reply