ಬೆಂಗಳೂರು ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ಪ್ರಾತಿನಿಧ್ಯಕ್ಕೆ ಒತ್ತಾಯ
ಬೆಂಗಳೂರು: ಮೌರ್ಯ ಹೋಟೆಲು ಸಭಾಂಗಣದಲ್ಲಿ ಉತ್ತರ ಕರ್ನಾಟಕ ಸಂಘ, ಸಂಸ್ಥೆಗಳ ಒಕ್ಕೂಟದ ವತಿಯಿಂದ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ 6 ವಿಧಾನಸಭಾ ಕ್ಷೇತ್ರದಲ್ಲಿ ಸಮುದಾಯದ ಹೆಚ್ಚಿನ ಮತದಾರರು ಇರುವುದರಿಂದ ವೀರಶೈವ ಲಿಂಗಾಯಿತ ಸಮಾಜಕ್ಕೆ ಆದ್ಯತೆ ನೀಡಬೇಕು ಆಗ್ರಹಿಸಿದರು.
ಉತ್ತರ ಕರ್ನಾಟಕ ಸಂಘ, ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಆರ್.ಮೇಟಿ ಮತ್ತು ಸಮುದಾಯದ ಮುಖಂಡರಾದ ಶಿವಮೊಗ್ಗ ವೀರಶೈವ ಮಹಾಸಭಾ ನಿರ್ದೇಶಕ ಶಿವಪ್ಪ ವಕೀಲರು, 2ಎ ಮೀಸಲಾತಿ ಹೋರಾಟ ಸಮಿತಿ ಉಪಾಧ್ಯಕ್ಷ ಅಶೋಕ್ ಪಾಟೀಲ್, ಪ್ರದೀಪ್ ಕೆ.ಸಿ. ಶಿವಣ್ಣ.ಯು.ಸಿ. ಮತ್ತು ಮುಖಂಡರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷ ಶಿವಕುಮಾರ್ ಆರ್ ಮೇಟಿ ಮಾತನಾಡಿ ಕರ್ನಾಟಕದಲ್ಲಿ ಬಹುಸಂಖ್ಯಾತ ಜನಸಂಖ್ಯೆ ಹೊಂದಿರುವ ವೀರಶೈವ ಲಿಂಗಾಯತ ಸಮುದಾಯ 1ಕೋಟಿ 30ಲಕ್ಷ ಜನ ಇದ್ದಾರೆ. 70ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯಿತ ಪ್ರಾಬಲ್ಯವಿದೆ ಮತ್ತು 30ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಣಾಯಕ ಮತದಾರರ ತೀರ್ಮಾನವಾಗಿದೆ ಎಂದು ಹೇಳಿದರು.
ಸಮಾಜ ಎಲ್ಲ ವರ್ಗ, ಧರ್ಮದ ಜೊತೆಯಲ್ಲಿ ವೀರಶೈವ ಲಿಂಗಾಯಿತ ಸಮಾಜ ಸ್ನೇಹ,ಸಹಬಾಳ್ಮೆಯಿಂದ ಬದುಕುತ್ತಿದ್ದಾರೆ. ನಮ್ಮ ಸಮಾಜದ ನಾಯಕರು ರಾಜಕೀಯದಲ್ಲಿ ಹೆಚ್ಚು ಪ್ರಾತಿನಿಧ್ಯ ಸಿಕ್ಕರೆ ಸಮುದಾಯದ ಜೊತೆಗೆ ಸಮಾಜದ ಶ್ರೇಯೋಭಿವೃದ್ದಿಯಾಗುತ್ತದೆ ಎಂದರು.
ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ ವೀರಶೈವ ಲಿಂಗಾಯಿತ ಸಮುದಾಯದ 15ರಿಂದ 20ಲಕ್ಷ ಮತಾದಾರರು ಇದ್ದಾರೆ. ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜನಗರ ಮತ್ತು ಕೆಲವು ವಿಧಾನಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಮತದಾರರು ನಮ್ಮ ಸಮುದಾಯದವರು. ಬಿಜೆಪಿ ಪಕ್ಷದಲ್ಲಿ ವೀರಶೈವ ಲಿಂಗಾಯಿತ ಸಮಾಜಕ್ಕೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಕಡೆಗಣನೆ ಯಾಕೆ ಮಾಡುತ್ತಿದ್ದಾರೆ ಎಂಬುದ ಶೋಚನಿಯ ಸಂಗತಿ ಎಂದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ 50 ಸಾವಿರಕ್ಕೂ ಹೆಚ್ಚು ಮತದಾರರು ಇದ್ದಾರೆ. ನಮ್ಮ ಸಮುದಾಯದ ಹಿರಿಯ ನಾಯಕರಾದ ಮಾಜಿ ಉಪಮಹಾಪೌರರಾದ ಬಿ.ಎಸ್.ಪುಟ್ಟರಾಜುರವರು ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅವರಿಗೆ ಟಿಕೇಟು ನೀಡಿದರೆ ಸಮುದಾಯಕ್ಕೆ ನ್ಯಾಯ ಸಿಗುತ್ತದೆ. ರಾಜಾಜಿನಗರ ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಜಯನಗರ ಈ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯಿತ ಸಮಾಜಕ್ಕೆ ಎಲ್ಲ ಪಕ್ಷದವರು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.




