ದಾವಣಗೆರೆ: ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿರ್ಸಜನೆ ಅವಧಿಯನ್ನು 25 ದಿನಗಳಿಗೆ ಸೀಮಿತಗೊಳಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಗಸ್ಟ್ 27 ರ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಗಣೇಶಮೂರ್ತಿ ಪ್ರತಿಷ್ಠಾಪಿಸಿ ವಿಸರ್ಜನೆ ಮಾಡುವ ಅವಧಿಯನ್ನು ಸೆ.20 ರವರೆಗೆ ಮಾತ್ರ ಮುಂದುವರೆಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಡಿಜೆ ಬಳಕೆಗೆ ನಿಷೇಧ: ದಾವಣಗೆರೆ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗಳು ಪೂರ್ಣಗೊಳ್ಳುವವರೆಗೆ ಸಾರ್ವಜನಿಕರ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಗಣೇಶಮೂರ್ತಿ ವಿಸರ್ಜನೆ ಮುಕ್ತಾಯಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶ ಹೊರಡಿಸಿದ್ದಾರೆ.




