ವಿಧಾನಸೌಧದ ಮುಂಭಾಗದಲ್ಲಿ ಭುವನೇಶ್ವರಿ ಪ್ರತಿಮೆ ಪ್ರತಿಷ್ಠಾಪನೆ

2 years ago

ಬೆಂಗಳೂರು: ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ರಸ್ತೆಯ ಎಡಭಾಗದಲ್ಲಿ ಭುವನೇಶ್ವರಿ ಪ್ರತಿಮೆ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ನಾಡದೇವತೆ ಭುನೇಶ್ವರಿ ಕೈಯಲ್ಲಿ ಹಳದಿ-ಕೆಂಪು ಧ್ವಜ ಹಿಡಿದಿರುವ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಇದಕ್ಕೆ 23 ಕೋಟಿ ರೂಪಾಯಿ ವೆಚ್ಚವಾಗಲಿದೆ. ತಕ್ಷಣಕ್ಕೆ ಕಾಮಗಾರಿ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.

ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಯ ಎಡಭಾಗದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಯಾಗಲಿದೆ ಲೋಹದ ಈ ಪ್ರತಿಮೆ ನಿರ್ಮಾಣಕ್ಕೆ 23 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜು ಮಾಡಿರುವುದಾಗಿ ಹೇಳಿದರು.

ಈ ಮೂಲಕ ಪ್ರಾದೇಶಿಕ ಅಸ್ಮಿತೆ ಮೂಲಕ ರಾಷ್ಟ್ರೀಯವಾದದ ಪೋಷಾಕು ಹೊದ್ರುವ ಬಿಜೆಪಿಗೆ ಸೆಡ್ಡು ಹೊಡೆಯಲು ರಾಜ್ಯದ ಆಡಳಿತ ರೂಡ ಕಾಂಗ್ರೆಸ್ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಅವಧಿಯಲ್ಲಿ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಸಿದ್ಧಪಡಿಸುವ ಮೂಲಕ ಪ್ರಾದೇಶಿಕತೆಯ ಮಂತ್ರ ಜಪಿಸಲಾಗಿತ್ತು. ಇದೀಗ ವಿಧಾನಸೌಧದ ಮುಂದೆ ನಾಡದೇವತೆ ಭುವನೇಶ್ವರಿ ಪ್ರತಿಮೆ ಪ್ರತಿಷ್ಠಾಪಿಸಲು ಸರ್ಕಾರ ತೀರ್ಮಾನ ಮಾಡಿದೆ.

Leave a Reply