ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಅತ್ಯಂತ ತುರ್ತು ಅಗತ್ಯವಾಗಿದ್ದು, ಸಂಕಷ್ಟದಲ್ಲಿರುವ ಹಾಗೂ ಸವಾಲುಗಳನ್ನು ಎದುರಿಸುತ್ತಿರುವ ಮಕ್ಕಳ ಹಿತರಕ್ಷಣೆಗಾಗಿ ಸರ್ಕಾರ ಜಾರಿಗೆ ತಂದಿರುವ ‘ಮಿಷನ್ ವಾತ್ಸಲ್ಯ’ ಯೋಜನೆಯು ಮಹತ್ತರವಾದ ಒತ್ತು ನೀಡುತ್ತಿದೆ. ಇಂತಹ ಮಕ್ಕಳನ್ನು ಗುರುತಿಸುವುದು, ಕಷ್ಟದ ಪರಿಸ್ಥಿತಿಯಲ್ಲಿರುವ ಮಕ್ಕಳ ಬಗ್ಗೆ ಮಾಹಿತಿ ಹಂಚಿಕೊಳ್ಳುವುದು ಹಾಗೂ ಅವರಿಗೆ ಸೂಕ್ತ ಪುನರ್ವಸತಿ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ ‘ಚೈಲ್ಡ್‌ಲೈನ್ 1098’ (Childline 1098) ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಮಕ್ಕಳ ರಕ್ಷಣೆಯ ಈ ಜಾಗೃತಿಯನ್ನು ವ್ಯಾಪಕಗೊಳಿಸುವ ಉದ್ದೇಶದಿಂದ, ರಾಜ್ಯದ ಎಲ್ಲಾ ಸರ್ಕಾರಿ, ಅರೆ-ಸರ್ಕಾರಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ‘1098’ ರ ಶಾಶ್ವತ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸುವಂತೆ ತಿಳಿಸಿದ್ದಾರೆ.




