ಧರ್ಮಸ್ಥಳ ಚಲೋ ಮಾಡುವ ಬದಲು “ಧರ್ಮಸ್ಥಳದಿಂದ ವಾಪಸ್ ಚಲೋ“ ಕಾರ್ಯಕ್ರಮ ಮಾಡಬೇಕಿತ್ತು: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಳಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಮತ್ತು ರಾಜ್ಯಸಭೆ ಸದಸ್ಯ ವೀರೇಂದ್ರ ಹೆಗ್ಗಡೆ ಬೆಂಬಲಿಸಿ ಧರ್ಮ ಯಾತ್ರೆ ವೇಳೆ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ನೀಡಿದ್ದರು. ಈ ವೇಳೆ ನಡೆದಿರುವ ಮಾತುಕತೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ ಕೆಲವು ಗಂಭೀರವಾದ ಪ್ರಶ್ನೆಗಳನ್ನು ಬಿಜೆಪಿ ನಾಯಕರ ಮುಂದಿರಿಸಿದ್ದಾರೆ.
“ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ“ ಎಂಬ ಕುಸುಮಾವತಿಯವರ ಮಾತಿಗೆ @BJP4Karnataka ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ? ಎಂದು ಕೇಳಿದ್ದಾರೆ.
@BYVijayendra ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು ಎಂದಿದ್ದಾರೆ.
ಬಿಜೆಪಿಯವರು ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ. @BJP4Karnataka ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು? ಎಂದು ಕೇಳಿದ್ದಾರೆ.
ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ.
ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನ್ಯಾಯ ಕೊಡಿಸುವರೇ? ಎಂದು ಪ್ರಶ್ನಿಸಿದ್ದಾರೆ.
ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ? ಎಂದು ಕೇಳಿದ್ದಾರೆ.
ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು “ಧರ್ಮಸ್ಥಳದಿಂದ ವಾಪಸ್ ಚಲೋ“ ಕಾರ್ಯಕ್ರಮ ಮಾಡಬೇಕಿತ್ತು! ಎಂದಿದ್ದಾರೆ.




