#ಧರ್ಮಸ್ಥಳಫೈಲ್ಸ್
ಬೆಂಗಳೂರು: ಧರ್ಮಸ್ಥಳದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ನೂರಾರು ಮೃತ ದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ರಚಿಸಲಾಗಿರುವ ವಿಶೇಷ ತನಿಕಾ ತಂಡ ತಕ್ಷಣವೇ ತನಿಖೆ ಆರಂಭಿಸಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಸ್ಐಟಿ ತಂಡಕ್ಕೆ ಧರ್ಮಸ್ಥಳಕ್ಕೆ ಹೋಗಿ ತನಿಖಾ ಪ್ರಕ್ರಿಯೆ ಶುರು ಮಾಡುವಂತೆ ಸೂಚಿಸಿದ್ದೇವೆ. ಸದ್ಯದಲ್ಲೇ ಎಸ್ಐಟಿ ತಂಡ ಅಲ್ಲಿಗೆ ಹೋಗಲಿದೆ ಎಂದರು.
ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಧರ್ಮಸ್ಥಳ ಪೊಲೀಸರಿಗೂ ಸೂಚನೆ ನೀಡಿದ್ದೇವೆ. ಎಸ್ಐಟಿ ತಂಡದಿಂದ ಯಾವ ಅಧಿಕಾರಿಯೂ ಹೊರಗುಳಿಯಲ್ಲ. ಹೊರಗೆ ಉಳಿಯೋದಾದ್ರೆ ನಮಗೆ ತಿಳಿಸಲಿ. ಆ ನಂತರ ಅದರ ಬಗ್ಗೆ ನಿರ್ಧಾರ ಮಾಡ್ತೇವೆ ಎಂದರು.
ಎಸ್ಐಟಿ ತನಿಖೆಗೆ ಬಿಜೆಪಿಯವರಿಂದ ಯಾಕೆ ಆಕ್ಷೇಪ? ಈಗಿನಿಂದ್ಲೇ ಏನೇನೋ ಫ್ರೇಮ್ ಮಾಡ್ತಿದ್ದಾರೆ. ರಾಜಕೀಯ ಉದ್ದೇಶವಿದೆ ಅಂತ ಯಾಕೆ ಹೇಳ್ತಾರೆ. ಎಸ್ಐಟಿ ತನಿಖೆಗೆ ಯಾಕೆ ಅವರ ವಿರೋಧ. ಇದನ್ನು ನೋಡಿದ್ರೆ ಅವರ ಮನಸ್ಸಲ್ಲಿ ಏನೋ ಇರಬಹುದು ಎಂದು ಬಿಜೆಪಿಯವರ ಆಕ್ಷೇಪಕ್ಕೆ ಆಕ್ರೋಶ ವ್ಯಕ್ತಪಡಿಸಿದರು.




