ಬೆಂಗಳೂರು: ಧೂಮಪಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಧೂಮಪಾನ ಕಡಿಮೆ ಮಾಡಲು ಪ್ರಯತ್ನಿಸುತ್ತಿರುವ ಸರ್ಕಾರ, ಇದೀಗ ಧೂಮಪಾನಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆ ನಿರ್ಮಿಸಲು ಮುಂದಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಧೂಮಪಾನಿಗಳಿಗಿಂತ ಅವರು ಸೇದಿ ಬಿಡುವ ಹೊಗೆಯಿಂದ ಅವರ ಅಕ್ಕ ಪಕ್ಕದವರ ಮೇಲೆ ಗಂಭೀರ ರೀತಿಯ ಪರಿಣಾಮಗಳು ಉಂಟಾಗುತ್ತಿದೆ. ಹೀಗಾಗಿ ಜನನಿಬಿಡ ಪ್ರದೇಶಗಳಲ್ಲಿ ಧೂಮಪಾನ ಕಾನೂನು ಬಾಹಿರ ಕೃತ್ಯ ಎಂದು ಘೋಷಿಸಿರುವ ಸರ್ಕಾರ, ಇದೀಗ ಧೂಮಪಾನಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆ ನಿರ್ಮಿಸಲು ಸೂಚಿಸಿದೆ.
ಪ್ರಮುಖವಾಗಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಧೂಮಪಾನ ನಡೆಯುವ ಬಾರ್ ಅಂಡ್ ರೆಸ್ಟೋರೆಂಟ್, ಪಬ್ ಮತ್ತು ವಸತಿ ಸಹಿತ ಹೋಟೆಲ್ ಗಳಲ್ಲಿ ಧೂಮಪಾನಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ವ್ಯಸನಿಗಳು ಅಲ್ಲಿಯೇ ಕಡ್ಡಾಯವಾಗಿ ಧೂಮಪಾನ ಮಾಡಬೇಕು. ಈ ಮೂಲಕ ಧೂಮಪಾನಿಗಳಿಂದ ಬೇರೆಯವರಿಗೆ ಆಗುವ ಹಾನಿ ತಡೆಗಟ್ಟಬಹುದು ಎಂದು ಕೋರ್ಟ್ ಆದೇಶ ಆಧರಿಸಿ ಸರ್ಕಾರ ನಿಯಮಾವಳಿಗಳನ್ನು ರೂಪಿಸಿದೆ. ಈ ನಿಯಮಗಳನ್ನು ಪಾಲಿಸದ ಹೋಟೆಲ್, ಬಾರ್ ಮತ್ತು ಪಬ್ ಗಳ ಪರವಾನಗಿ ರದ್ದು ಸೇರಿದಂತೆ ಕಾನೂನು ಕ್ರಮದ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರಿನ ಹಲವು ಕಡೆಗಳಲ್ಲಿ ಈ ನಿಯಮ ಪಾಲಿಸಲಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ನಿಯಮ ಪಾಲಿಸದ ಹೋಟೆಲ್ ಮತ್ತು ಪಬ್ಬುಗಳ ಪಟ್ಟಿ ತಯಾರಿಸಿದ್ದಾರೆ.
ಇದನ್ನು ಆಧರಿಸಿ ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿರುವ 200ಕ್ಕೂ ಅಧಿಕ ಬಾರ್, ಪಬ್ ಹಾಗೂ ಹೊಟೇಲ್‌ಗಳಿಗೆ ನೋಟಿಸ್ ನೀಡಲಾಗಿದ್ದು, ತಕ್ಷಣವೇ ಸ್ಮೋಕಿಂಗ್ ಜೋನ್ ನಿರ್ಮಾಣ ಮಾಡಬೇಕು, ಇಲ್ಲವಾದರೆ ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. 20ಕ್ಕಿಂತ ಹೆಚ್ಚು ಆಸನಗಳಿರುವ ಎಲ್ಲಾ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ನ್ನು ನಿರ್ಮಿಸಬೇಕು ಎಂದು ಸೂಚಿಸಲಾಗಿದೆ.



