ಬೆಂಗಳೂರು: ಬೆಳಗಾವಿ, ಧಾರವಾಡ ವೃತ್ತ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ಅರಣ್ಯ ಒತ್ತುವರಿ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ನಿರ್ದೇಶನ ನೀಡಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕಳೆದದ ಎರಡು ವರ್ಷಗಳಿಂದ ಬೆಳಗಾವಿ ಹಾಗೂ ಧಾರವಾಡ ವೃತ್ತ ಸೇರಿದಂತೆ ರಾಜ್ಯದಾದ್ಯಂತ ಹೊಸ ಅರಣ್ಯ ಒತ್ತುವರಿ ಪ್ರಕರಣಗಳು ವ್ಯಾಪಕ ಪ್ರಮಾಣದಲ್ಲಿ ಹೆಚ್ಚಾಗಿವೆ ಎಂದು ಆರೋಪಿಸಿ ಧಾರವಾಡದ ನಿವಾಸಿಯೊಬ್ಬರು ಸಚಿವಾಲಯಕ್ಕೆ ದೂರು ನೀಡಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಂಡು ಸಚಿವಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಸಚಿವಾಲಯದ ಉಪ ಮಹಾನಿರ್ದೇಶಕರು ಸೂಚನೆ ನೀಡಿದ್ದಾರೆ.
ಬೆಳಗಾವಿ ವೃತ್ತದಲ್ಲಿ 2022-23ರಲ್ಲಿ 110 ಹೊಸ ಒತ್ತುವರಿ ಪ್ರಕರಣಗಳು, 2023-24ರಲ್ಲಿ 64 ಹೊಸ ಪ್ರಕರಣಗಳು ಪತ್ತೆ ಆಗಿವೆ. ಧಾರವಾಡ ವೃತ್ತದಲ್ಲಿ 56 ಕಡೆಗಳಲ್ಲಿ ಅರಣ್ಯ ಒತ್ತುವರಿ ಆಗಿದೆ. ಆದರೆ, ಒತ್ತುವರಿ ತಡೆಗೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇದರಲ್ಲಿ ವೃತ್ತದ ಸಿಸಿಎಫ್, ಡಿಸಿಎಫ್, ಎಸಿಎಫ್ ಅವರ ಲೋಪ ಎದ್ದು ಕಾಣುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅರಣ್ಯ ಒತ್ತುವರಿಯನ್ನು ಕಾಲಮಿತಿಯಲ್ಲಿ ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ 2001ರಲ್ಲಿ ಆದೇಶಿಸಿದೆ. ಹೊಸ ಒತ್ತುವರಿಗೆ ಅನುವು ಮಾಡಿಕೊಡಬಾರದು ಎಂದು ಪರಿಸರ ಸಚಿವಾಲಯ 2022ರಲ್ಲಿ ಸೂಚಿಸಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ನೇತೃತ್ವದ ರಾಜ್ಯ ಮಟ್ಟದ ಸಮಿತಿ ರಚಿಸಬೇಕು. ಈ ಸಮಿತಿಯು ಆರು ತಿಂಗಳಿಗೊಮ್ಮೆ ಸಭೆ ಸೇರಿ ಪರಾಮರ್ಶೆ ನಡೆಸಬೇಕು. ಒತ್ತುವರಿ ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವಾಲಯ ತಾಕೀತು ಮಾಡಿದೆ.
ಜೊತೆಗೆ, ಅರಣ್ಯದ ಹೊಸ ಒತ್ತುವರಿ ತಡೆಯಲು ವಿಫಲರಾದ ಡಿಸಿಎಫ್, ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಪರಿಸರ ಸಚಿವಾಲಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಆದರೆ, ಅಧಿಕಾರಿಗಳು ಒತ್ತುವರಿ ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ. ಅರಣ್ಯ ಸಚಿವರ ಟಿಪ್ಪಣಿಗೂ ಕಿಮ್ಮತ್ತು ನೀಡಿಲ್ಲ ಎಂದು ಪತ್ರದಲ್ಲಿ ದೂರಲಾಗಿತ್ತು.




