ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ಹೂಡಿಕೆ ಸಾಧ್ಯವಾಗುವಂತೆ ವಿಷನ್ ಡಾಕ್ಯುಮೆಂಟ್ ತಯಾರಿಸಲು ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಸೂಚಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತಮ್ಮನ್ನು ಭೇಟಿಯಾದ ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಅಧ್ಯಕ್ಷ ಪಂಕಜ್ ಮಹೀಂದ್ರೂ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ವಿಸ್ತೃತ ಮಾತುಕತೆ ವೇಳೆ ಈ ಸೂಚನೆ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದಕ್ಕೆ ಸಮಾನಾಂತರವಾಗಿ ರಾಜ್ಯ ಸರಕಾರ ಕೂಡ ಒಂದು ಯೋಜನೆಯನ್ನು ರೂಪಿಸಲು ಚಿಂತಿಸುತ್ತಿದ್ದು, ಇದರ ಕಾರ್ಯಸಾಧ್ಯತೆಯನ್ನು ಕುರಿತು ಅಧ್ಯಯನ ಮಾಡುತ್ತಿದೆ. ಇದು ಕರಡು ಹಂತದಲ್ಲಿದ್ದು, ಇದಕ್ಕೆ ಐಸಿಇಎ ನೀಡುವ ಸಲಹೆಗಳನ್ನು ಸ್ವಾಗತಿಸಲಾಗುವುದು ಎಂದರು.
ಮೊಬೈಲ್ ಫೋನ್ ಬಿಡಿಭಾಗಗಳು ಮಾತ್ರವಲ್ಲದೆ ಕೈಗಾರಿಕಾ ಎಲೆಕ್ಟ್ರಾನಿಕ್ಸ್, ಕಾರ್ಯತಂತ್ರ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಕೂಡ ಅಪಾರ ಅವಕಾಶಗಳಿವೆ. ಅಧಿಕಾರಿಗಳಿಗೆ ಕೇಂದ್ರ ಸರಕಾರದ ಯೋಜನೆ ಮತ್ತು ಇತರ ರಾಜ್ಯಗಳಲ್ಲಿ ಇರುವ ಇಂತಹ ಯೋಜನೆಗಳ ಅಧ್ಯಯನ ಮಾಡುವಂತೆ ಸೂಚಿಸಲಾಗಿದೆ ಎಂದರು.
ಇದೇ ವೇಳೆ ಪಂಕಜ್ ಮಹೀಂದ್ರ ಮಾತನಾಡಿ, ಕೇಂದ್ರ ಸರಕಾರದ ಯೋಜನೆಯಡಿಯಲ್ಲಿ ಸಬ್-ಅಸೆಂಬ್ಲಿ (ಡಿಸ್-ಪ್ಲೇ, ಕ್ಯಾಮರಾ ಮಾಡ್ಯೂಲ್ಸ್), ಬೇರ್ ಕಾಂಪೊನೆಂಟ್ಸ್ ಮತ್ತು ತಯಾರಿಕೆಗೆ ಬೇಕಾಗುವ ಸಾಧನಗಳಿಗೆ ಒತ್ತು ಕೊಡಲಾಗಿದೆ. ಇದಲ್ಲದೆ ವಹಿವಾಟನ್ನು ಆಧರಿಸಿ ಪ್ರೋತ್ಸಾಹನಾ ಭತ್ಯೆಗಳು, ಶೇಕಡ 25ರಷ್ಟು ಬಂಡವಾಳ ಸಬ್ಸಿಡಿ ಬೆಂಬಲ ಕೊಡಲಾಗುವುದು. ಈ ಯೋಜನೆಗೆ ಕೇಂದ್ರ ಸರಕಾರವು 22,900 ಕೋಟಿ ರೂ. ವಿನಿಯೋಗಿಸುತ್ತಿದೆ ಎಂದರು.
ಕೇಂದ್ರ ಸರಕಾರ ಈ ವರ್ಷದ ನವೆಂಬರ್ ತನಕ 7,172 ಕೋಟಿ ರೂ. ಮೊತ್ತದ 17 ಹೂಡಿಕೆ ಯೋಜನೆಗಳಿಗೆ ಒಪ್ಪಿಗೆ ನೀಡಿದೆ. ಇದರಿಂದ 11,800 ನೇರ ಉದ್ಯೋಗಗಳು ಸೃಷ್ಟಿಯಾಗಲಿದ್ದು, 65 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಉತ್ಪನ್ನಗಳು ತಯಾರಾಗಲಿವೆ ಎಂದರು.




