ಹಾಸನ: ಕೃಷಿ ಚಟುವಟಿಕೆಗೆ ತೊಂದರೆ ಆಗದಂತೆ ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಔಷಧಿಗಳನ್ನು ಒದಗಿಸಲು ಕ್ರಮವಹಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆ, ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಗಳಾದ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಸಿ ಮಾತನಾಡಿದ ಅವರು, ಬೆಳೆ ಸಂರಕ್ಷಣೆಗೆ ಔಷಧಿ ಸಿಂಪರಣೆ ಕುರಿತು ರೈತರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿಗೆ ಯಾವುದೇ ಗ್ರಾಮಗಳಲ್ಲಿ ತೊಂದರೆ ಆಗದಂತೆ ನಿಗಾವಹಿಸಲು ಸೂಚನೆ ನೀಡಿದರು. ಭೂಕುಸಿತ ಸಂಭವಿಸಿ ರಸ್ತೆ ತಡೆಯಾಗಿ ಸಂಚಾರಕ್ಕೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಾನುವಾರುಗಳು ಆಕಸ್ಮಿಕವಾಗಿ ಸಾವನ್ನಪ್ಪಿದರೆ ಪರಿಹಾರ ಪಡೆಯುವ ನಿಟ್ಟಿನಲ್ಲಿ ವಿಮೆ ಮಾಡಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ,ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ಹಾಜರಿದ್ದರು.



