ಬೆಂಗಳೂರು: ಕಲಿಯುಗದ ಆರಾಧ್ಯ ದೈವ ಎಂದು ನಂಬಲಾದ ತಿರುಪತಿ ತಿಮ್ಮಪ್ಪನ ಪ್ರಸಾದ ಭಕ್ತರ ಪ್ರೀತಿಯ ಲಾಡುವಿನಲ್ಲಿ ಪ್ರಾಣಿಜನ್ಯ ಕೊಬ್ಬಿನ ಅಂಶ ಪತ್ತೆಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಿಗೆ ತುಪ್ಪ ಬಳಕೆ ಕುರಿತು ಸುತ್ತೋಲೆ ಹೊರಡಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುವ ಲಾಡು ಸೇರಿದಂತೆ ಇತರೆ ಉತ್ಪನ್ನಗಳ ತಯಾರಿಕೆಗೆ ಕೆಎಂಎಫ್ ನ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚನೆ ನೀಡಿದೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ.
ಜೊತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.




