ಗುಪ್ತಚರ ಇಲಾಖೆ ವೈಫಲ್ಯವೇ ಪಹಲ್ಗಾಮ್ ಉಗ್ರರ ದಾಳಿಗೆ ಕಾರಣ: ಅಪ್ಸರ್ ಕೊಡ್ಲಿಪೇಟೆ
ಎಸ್ಡಿಪಿಐ ಬೀದರ್ ಜಿಲ್ಲಾ ಸಮಿತಿ ಸಭೆ
ಹುಮನಾಬಾದ್: ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಬೀದರ್ ಜಿಲ್ಲಾ ಸಮಿತಿ ಸಭೆಯು ಜಿಲ್ಲಾಧ್ಯಕ್ಷರಾದ ಶೇಕ್ ಮಕ್ಸೂದ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ರವರ ಸಮ್ಮುಖದಲ್ಲಿ ಜರುಗಿತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯಾನಕ ಉಗ್ರ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ನಿರಪರಾಧಿ ಜೀವಗಳು ಹತ್ಯೆ ಮಾಡಿರುವ ಈ ಕೃತ್ಯ ಮನುಷ್ಯತ್ವವಿಲ್ಲದ ಕ್ರೂರತೆಗೆ ನಿದರ್ಶನವಾಗಿದೆ. ಇಂತಹ ಹಿಂಸಾತ್ಮಕ ಕೃತ್ಯಗಳಿಗೆ ನಾಗರಿಕ ಸಮಾಜದಲ್ಲಿ ಸ್ಥಾನವಿಲ್ಲ ಎಂದರು.
ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯಲ್ಲಿ ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದ್ದು, ಪ್ರವಾಸಿಗರ ಮೇಲೆ ನಡೆದ ಭೀಕರ ದಾಳಿಯು ದೇಶದ ಜನತೆ ಜಗತ್ತಿನ ಮುಂದೆ ತಲೆ ತಗ್ಗಿಸುವಂತ ಹೇಯ ಕೃತ್ಯವಾಗಿದ್ದು, ಎಸ್ ಡಿಪಿಐ ಪಕ್ಷವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ ಹಾಗೂ ದಾಳಿಯಲ್ಲಿ ಮಡಿದವರಿಗೆ ಸಂತಾಪವನ್ನು ಸೂಚಿಸುತ್ತದೆ ಎಂದರು.
ಈ ಘಟನೆಯು ಪುಲ್ವಾಮ ದಾಳಿಯ ನಂತರದ ಎರಡನೇ ಅತೀ ದೊಡ್ಡ ಘಟನೆಯಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಶೀಘ್ರವೇ ಇದರ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಬೇಕೆಂದು ಪಕ್ಷವು ಒಕ್ಕೂಟ ಸರಕಾರವನ್ನು ಆಗ್ರಹಿಸುತ್ತದೆ. ಈ ಹೇಯ ಕೃತ್ಯದ ಹಿಂದಿರುವ ಅಪರಾಧಿಗಳನ್ನು ಗುರುತಿಸಿ ಅವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಮುಂದೆ ಇಂತಹ ಮನುಷ್ಯತ್ವ ವಿರೋಧಿ ಘಟನೆಗಳು ನಡೆಯದಂತೆ ತಡೆಯುವಂತಾಗಬೇಕು ಆಗ್ರಹಿಸಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಉಲ್ಲಾ, ಜಿಲ್ಲಾ ಕಾರ್ಯದರ್ಶಿ ತೌಹೀದ್ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಹಾಜರಿದ್ದರು.
Intelligence failure is the reason for the Pahalgam terrorist attack ApsarKodlipete




