ದಾವಣಗೆರೆ: ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಗಟ್ಟಲು ಸರ್ಕಾರಿ, ಸಾರ್ವಜನಿಕ, ಖಾಸಗಿ ವಲಯ ಕಾರ್ಖಾನೆಗಳು, ಗಾರ್ಮೆಂಟ್, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಇಲಾಖೆ, ಇತ್ಯಾದಿ ಕಡೆ ಅಂತರಿಕ ದೂರು ನಿವಾರಣಾ ಸಮಿತಿಗಳನ್ನು ರಚನೆ ಮಾಡದೇ ಇರುವ ಸಂಸ್ಥೆಗಳಲ್ಲಿ ಆಂತರಿಕ ದೂರು ನಿವಾರಣೆ ಸಮಿತಿಗಳನ್ನು ರಚನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸಮಿತಿ ರಚನೆ ಮಾಡದ ಸಂಸ್ಥೆಗಳ ಮೇಲೆ ಪಿಓಎಸ್ಹೆಕಚ್ 2013ರ ಕಾಯ್ದೆಯ ಸೆಕ್ಷನ್ 26 ರ ಪ್ರಕಾರ ಹಾಗೂ ಸಬ್ಸೆಂಕ್ಷನ್ 1 (4) ರ ಪ್ರಕಾರ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು, ಹಾಗೂ ಸಮಿತಿಗಳು ರಚನೆಯಾಗಿರುವ ,ರಚನೆಯಾಗದಿರುವ ಬಗ್ಗೆ ಮಾಹಿತಿಯು ಷಿಬಾಕ್ಸ್ ಪೋರ್ಟಲ್(She-Box Portal)ನಲ್ಲಿ ಲಭ್ಯವಿರುತ್ತದೆ. ಜಿಲ್ಲೆಯ ಮಾಹಿತಿಯನ್ನು ಪರಿಶೀಲಿಸಲಾಗಿದ್ದು ಜಿಲ್ಲೆಯಲ್ಲಿ ಇನ್ನೂ ಅಂತರಿಕ ದೂರು ಸಮಿತಿಯನ್ನು ರಚನೆ ಮಾಡದೇ ಇರುವ ಸಂಸ್ಥೆಗಳಲ್ಲಿ ತುರ್ತಾಗಿ ಸಮಿತಿ ರಚಿಸಿ ಮತ್ತು ಈಗಾಗಲೇ ರಚನೆ ಮಾಡಿರುವ ಸಮಿತಿಗಳನ್ನು ಸಂಸ್ಥೆಯ ಇತರೆ ಮಾಹಿತಿಯೊಂದಿಗೆ ಶೀಬಾಕ್ಸ್ ಪೋರ್ಟಲ್ನಸಲ್ಲಿ ಇಂಡೀಕರಿಸಲು ಆದ್ಯತೆಯ ಮೇರೆಗೆ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.
ಈಗಾಗಲೇ ಅಸಂಘಟಿತ ವಲಯ, ಮನೆ ಕೆಲಸದ ಮಹಿಳೆಯರು 10ಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರಿಗೆ ಉಂಟಾಗುವ ಲೈಂಗಿಕ ಕಿರುಕುಳದ ಕುರಿತು ದೂರು ಸಲ್ಲಿಸಲು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸ್ಥಳೀಯ ದೂರು ನಿರ್ವಹಣಾ ಸಮಿತಿಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.




