ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ನನ್ನ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ.
ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವರೆಗೆ ವಿಸ್ತರಿಸಲಾಗಿದೆ.
– ಸಿದ್ದರಾಮಯ್ಯ, ಸಿ ಎಂ




