ಜಿಲ್ಲಾ ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಅಪಸ್ಮಾರ ದಿನಾಚರಣೆ

1 year ago

ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಧಾರವಾಡ, ಬೆಂಗಳೂರು ರಾಷ್ಟ್ರೀಯ ಮಾನಸಿಕ ಹಾಗೂ ನರವಿಜ್ಞಾನಗಳ ಸಂಸ್ಥೆ, ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ಅಪಸ್ಮಾರ ದಿನಾಚರಣೆ 2025 ರ ಅಂಗವಾಗಿ ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ  ಮೆದಳು ಆರೋಗ್ಯ ಉಪಕ್ರಮ ವಿಭಾಗದ ಜಿಲ್ಲಾ ನೋಡಲ್ ಅಧಿಕಾರಿ ಡಾ. ಕಳಸೂರಮಠ ಎಸ್.ಬಿ, ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಮಂಜುನಾಥ ಸೂಪ್ಪಿಮಠ , ಐ.ಇ.ಸಿ. ವಿಭಾಗದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಠ, ಜಿಲ್ಲಾ ಸಮೀಕ್ಷಣಾಧಿಕಾರಿ ಹಾಗೂ ಸಹಾಯಕ ಕೀಟ ಶಾಸ್ತ್ರಜ್ಞ ಡಾ. ಮಂಜುನಾಥ ಟಿ.ಪಿ,ಜಿಲ್ಲಾ ಆಸ್ಪತ್ರೆಯ ಜನರಲ್ ಫಿಜಿಸಿಯನ್ ಡಾ. ಶ್ರೀಧರ ಪಾಟೀಲ, ಮೆದುಳು  ಆರೋಗ್ಯ ವಿಭಾಗದ ವೈದ್ಯಾಧಿಕಾರಿ ಡಾ. ಮಹಮ್ಮದ್ ಆಸಿಫ್ ನದಾಫ  ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿ ಭಾಗವಹಿಸಿದರು.

Leave a Reply