ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವವರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ ಷಿಪ್ ಅವಕಾಶ
ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.
ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ:
• ಮಹಿಳಾ ಆಯವ್ಯಯದಡಿ 10 ಮಹಿಳೆಯರು,
• ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು
• ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಷಿಪ್ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಆಗಿರುತ್ತದೆ.
ಅರ್ಜಿ ಸಲ್ಲಿಸಲು 2025 ರ ಜುಲೈ 25 ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.




