ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದೆ ಎಂದು ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಟ್ಟು 21 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ವಿವರ: ಮಹಿಳಾ ಆಯವ್ಯಯದಡಿ 08 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಕಲ್ಪಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಪೆಂಡ್ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಸ್ವವಿವರದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/Qth3f5FjMHXSxTB68 ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ.




