ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೊಪ್ಪಳ: ಕರ್ನಾಟಕ ಮಾಧ್ಯಮ ಅಕಾಡೆಮಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.
ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇ-ಮೇಲ್ ಮೂಲಕ ಕಳುಹಿಸಬಹುದು.



