ಧಾರವಾಡ: ಹಿರಿಯ ಅಂಚೆ ಅಧೀಕ್ಷಕರ ಕಚೇರಿ, ಧಾರವಾಡ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಸಂದರ್ಶನ ಕರೆಯಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಡಿಸೆಂಬರ್ 11, 2023 ರಂದು ಬೆಳಗ್ಗೆ 11 ಗಂಟೆಗೆ ಧಾರವಾಡ ಕೆ.ಸಿ. ಪಾರ್ಕ್ ಹತ್ತಿರ ಇರುವ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ರೂ.5,000/- ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ (NSC) ಅಥವಾ ಕಿಸಾನ ವಿಕಾಸ ಪತ್ರ (KVP) ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ್ ನೀಡಲಾಗುವುದು. ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ಜೀವ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಅಂಚೆ ಅಧೀಕ್ಷಕರು, ಧಾರವಾಡ ವಿಭಾಗ-580008. ಹತ್ತಿರದ ಅಂಚೆ-ಕಚೇರಿಯನ್ನು ಸಂಪರ್ಕಿಸಬಹುದು.




