ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಕಾನೂನಿನ ಪ್ರಕಾರ ತನಿಖೆ ನಡೆಸಿ, ಕ್ರಮ: ಜಿ.ಪರಮೇಶ್ವರ್

3 years ago

ಬೆಂಗಳೂರು: ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದು, ಅದನ್ನು ಪರಿಶೀಲಿಸಿ ಎಫ್ ಐಆರ್ ದಾಖಲಿಸಲಾಗಿದೆ. ಪೊಲೀಸರು ಅದರ ಬಗ್ಗೆ ತನಿಖೆ ಮಾಡುತ್ತಿದ್ದು, ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಇದು ಒಬ್ಬ ಮಾಜಿ ಮುಖ್ಯಮಂತ್ರಿಗಳ ವಿಷಯಕ್ಕೆ ಸಂಬಂಧಿಸಿದ್ದಾಗಿದ್ದು, ಬಹಳ ಸೂಕ್ಷ್ಮ ವಿಷಯ. ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದರು.

ಪ್ರಕರಣದಲ್ಲಿ ಮುಖ್ಯಮಂತ್ರಿಯವರಿಗಾಗಲಿ, ಉಪ ಮುಖ್ಯಮಂತ್ರಿಯವರಿಗಾಗಲಿ, ನನಗಾಗಲೀ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಪೊಲೀಸರು ಕಾನೂನಿನ ಪ್ರಕಾರ ತನಿಖೆ ನಡೆಸಿ, ಕ್ರಮ ಜರುಗಿಸುತ್ತಾರೆ. ದೂರು ಕೊಟ್ಟಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಆ ಮಹಿಳೆ ಕೈಬರಹದ ದೂರು ಕೊಟ್ಟಿಲ್ಲ, ಟೈಪ್ ಮಾಡಿದ ದೂರಿನ ಪ್ರತಿಯನ್ನು ಸಲ್ಲಿಸಿದ್ದರು ಎಂಬ ಮಾಹಿತಿ ನೀಡಿದ್ದಾರೆ ಎಂದರು.

ಅಗತ್ಯ ಕಂಡುಬಂದರೆ ದೂರುದಾರ ಮಹಿಳೆಗೆ ಪೊಲೀಸ್ ರಕ್ಷಣೆ ಒದಗಿಸಲಾಗುತ್ತದೆ. ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಬೇಕೆ? ಬೇಡವೆ? ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ. ಈ ಕುರಿತು ತಾವು ಏನನ್ನೂ ಹೇಳಲಾಗದು ಎಂದರು.

Leave a Reply