ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಮತ್ತೊಮ್ಮೆ ಸಂತಾಪ ಸೂಚಿಸುತ್ತಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿ, ತನಿಖೆ ನಡೆಸಲಾಗುತ್ತದೆ ಎಂದರು.
ಆರ್.ಸಿ.ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ ಎಂದರು.
ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ ಎಂದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕ, ಸಚಿವ, ಡಿಸಿಎಂ ಹಾಗೂ ಸಿಎಂ ಆದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನನ್ನನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎನ್ನುವ ಭರವಸೆಯನ್ನು ಕೂಡ ನೀಡಬಯಸುತ್ತೇನೆ ಎಂದರು.
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.




