ಬೆಂಗಳೂರು: ತನ್ನ ಪತ್ನಿಯಿಂದಲೇ ಬರ್ಬರವಾಗಿ ಹತ್ಯೆಯಾದ ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ-ಐಜಿಪಿ) ಓಂ ಪ್ರಕಾಶ್ ಕೊಲೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಓಂಪ್ರಕಾಶ್ ಕೊಲೆಯಲ್ಲಿ ಅವರ ಪುತ್ರಿ ಕೃತಿ ಹೆಸರನ್ನು ಕೈಬಿಟ್ಟು ಚಾರ್ಜ್‌ಶೀಟ್ ಮಾಡಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಹತ್ಯೆ ಪ್ರಕರಣದಲ್ಲಿ ಓಂಪ್ರಕಾಶ್ ಅವರ ಪುತ್ರಿ ಕೃತಿ ಅವರದ್ದು ಯಾವುದೇ ಪಾತ್ರ ಇಲ್ಲ ಎಂದು ಪೊಲೀಸರು ನಿರ್ಧಾರಕ್ಕೆ ಬಂದಿದ್ದು, ಆರೋಪ ಪಟ್ಟಿಯಲ್ಲಿ ಈ ಬಗ್ಗೆ ವಿವರವಾದ ಉಲ್ಲೇಖ ಮಾಡಿದ್ದಾರೆ.
ಓಂ ಪ್ರಕಾಶ್ ಕೊಲೆಯಾದ ಬಳಿಕ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಓಂಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳ ವಿರುದ್ಧ ದೂರು ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಓಂಪ್ರಕಾಶ್ ಪತ್ನಿ ಪಲ್ಲವಿಯನ್ನ ಎ1 ಆರೋಪಿ, ಮಗಳನ್ನ ಎ2 ಆರೋಪಿಯನ್ನಾಗಿ ಮಾಡಲಾಗಿತ್ತು. ತನಿಖೆಯ ವೇಳೆ ಓಂಪ್ರಕಾಶ್ ಕೊಲೆಯಲ್ಲಿ ಮಗಳ ಪಾತ್ರ ಇಲ್ಲ ಎನ್ನುವುದು ಕಂಡುಬಂದಿದೆ. ತಂದೆಯ ಮರ್ಡರ್ ಕೇಸ್‌ನಲ್ಲಿ ಎ2 ಆರೋಪಿಯಾಗಿದ್ದ ಮಗಳು ಕೃತಿಯನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗಿದೆ.
ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್‌ಶೀಟ್ ಸಿಸಿಬಿ ಸಲ್ಲಿಕೆ ಮಾಡಿದ್ದು, ಕೊಲೆಗೆ ಪ್ರಮುಖವಾದ ಕಾರಣ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿಯ ವಿಚಾರ ಎಂದು ಉಲ್ಲೇಖ ಮಾಡಿದೆ.
ಪ್ರಕರಣದ ತನಿಖೆ ಮುಂದುವರೆಸಲು ಕೊಲೆಯಾದ ಡಿಜಿ-ಐಜಿಪಿ ಪುತ್ರ ಕಾರ್ತಿಕೇಶ್, ಪ್ರಕರಣದ ತನಿಖೆ ಮುಂದುವರೆಸಲು ಸರ್ಕಾರದಿಂದ ಅನುಮತಿ ಪಡೆದು ಸ್ವಂತ ಖರ್ಚಿನಲ್ಲಿ ಎಸ್‌ಪಿಪಿಯನ್ನು ನೇಮಕ ಮಾಡಿಕೊಂಡಿದ್ದಾರೆಂದು ಗೊತ್ತಾಗಿದೆ.




