ಬೆಂಗಳೂರು: ಮಹಿಳೆಯನ್ನು ಬರ್ಬರವಾಗಿ ಕೊಲೆಗೈದು ತುಂಡು ತುಂಡಾಗಿ ಕತ್ತರಿಸಿ ರೆಫ್ರಿಜರೇಟರ್ ನಲ್ಲಿ ಇರಿಸಿದ್ದ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಕೇಂದ್ರ ವಿಭಾಗದ ಪೊಲೀಸರು ಮೃತದೇಹದ ತುಂಡುಗಳನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ಕ್ರೈಂ ಸೀನ್ ಪರಿಶೀಲಿಸಿದೆ. ಮೃತದೇಹದ ತುಂಡುಗಳ ಸ್ಯಾಂಪಲ್ ಕಲೆ ಹಾಕಿದೆ. ಪೊಲೀಸರು 28 ದೇಹದ ಭಾಗಗಳನ್ನು ಪತ್ತೆ ಮಾಡಿದ್ದಾರೆ. ಈಗಾಗಲೇ ಮೃತದೇಹದ ತುಂಡುಗಳ ಸ್ಯಾಂಪಲ್, ಅಳತೆ, ಬೌನ್ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ವಿಷಯಗಳು ಬೆಳಕಿಗೆ ಬರುತ್ತಿವೆ. ಆರೋಪಿ ಕೊಲೆ ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಅವುಗಳನ್ನು ರೆಫ್ರಿಜರೇಟರ್ ನಲ್ಲಿ ಜೋಡಿಸಿ ಫ್ರಿಡ್ಜ್ ಆನ್ ಮಾಡಿದ್ದ. ಹೀಗಾಗಿ ಮೃತದೇಹ ತುಂಡುಗಳು ಕೊಳೆಯುವ ಹಂತಕ್ಕೆ ಹೋಗಿರಲಿಲ್ಲ. ಆದರೆ ಕರೆಂಟ್ ಹೋದ ಸಂದರ್ಭದಲ್ಲಿ ಮೃತದೇಹದ ತುಂಡುಗಳಿಂದ ರಕ್ತ ಕೆಳಗೆ ಸೋರಿಕೆಯಾಗಿ ಅದಕ್ಕೆ ಹುಳುಗಳು ಸೇರಿದ್ದರಿಂದ ದುರ್ವಾಸನೆ ಬರುತ್ತಿತ್ತು.
ಪ್ರಕರಣ ಸಂಬಂಧ ಅಕ್ಕಪಕ್ಕದ ನಿವಾಸಿಗಳು ಮಾಹಿತಿ ನೀಡಿ, ನಾವು ಹಲವು ವರ್ಷದಿಂದ ಇಲ್ಲಿ ಬಾಡಿಗೆಗೆ ಇದ್ದೇವೆ. ಮೃತ ಮಹಿಳೆ ಕಳೆದ ಆರು ತಿಂಗಳಿಂದ ಒಂಟಿಯಾಗಿ ವಾಸವಾಗಿದ್ದರು. ಈ ಘಟನೆ ನಡೆದು ಕೆಲ ದಿನಗಳು ಕಳೆದರೂ ಯಾರಿಗೂ ಗೊತ್ತಾಗಿಲ್ಲ. ಆಗಾಗ ಮನೆಯಿಂದ ದುರ್ವಾಸನೆ ಬರುತ್ತಿತ್ತು. ಮನೆ ಮೇಲಿನವರಿಗೆ ಸ್ವಲ್ಪ ವಾಸನೆ ಬಂದಿದೆ. ಆದರೆ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡು ಪರಿಶೀಲಿಸಿಲ್ಲ. ಇವತ್ತು ಮಹಿಳೆಯ ತಾಯಿ ಬಂದು ನೋಡಿ ಕಿರುಚಾಡಿದರು. ಅದಾದ ಮೇಲೆಯೇ ನಮಗೆ ವಿಷಯ ಗೊತ್ತಾಗಿದೆ. ಅಲ್ಲಿವರೆಗೂ ನಮಗೆ ಭಯಾನಕ ಕೊಲೆ ಆಗಿದೆ ಎಂದು ಗೊತ್ತಿರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಬಿಹಾರ ಮೂಲದ ಮಹಾಲಕ್ಷ್ಮಿ (29) ಕೊಲೆಯಾದ ದುರ್ದೈವಿ. ಇವರು ಈ ಮೊದಲು ಗಂಡ ಮತ್ತು 4 ವರ್ಷದ ಮಗುವಿನೊಂದಿಗೆ ನೆಲಮಂಗಲದಲ್ಲಿ ವಾಸವಾಗಿದ್ದರು. ಕಳೆದ 6 ತಿಂಗಳ ಹಿಂದೆ ಗಂಡ-ಹೆಂಡತಿ ನಡುವೆ ಮನಸ್ಥಾಪ ಉಂಟಾಗಿತ್ತು. ಈ ಹಿನ್ನೆಲೆ ಮಹಾಲಕ್ಷ್ಮಿ ಗಂಡನಿಂದ ದೂರವಾಗಿ 3 ತಿಂಗಳಿನಿಂದ ಒಬ್ಬಂಟಿಯಾಗಿ ಬೆಂಗಳೂರಿನ ವೈಯಾಲಿಕಾವಲ್ನ ವಿನಾಯಕನಗರದಲ್ಲಿ ಬಾಡಿಗೆ ಮನೆಯಲ್ಲಿದ್ದರು. ಅಲ್ಲದೇ ಪ್ರತಿಷ್ಠಿತ ಮಾಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಹತ್ತು ದಿನಗಳ ಹಿಂದೆಯೇ ಮಹಿಳೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಮಹಾಲಕ್ಷ್ಮಿ ಕಳೆದ ಒಂದು ವಾರದಿಂದ ಕೆಲಸಕ್ಕೆ ಹೋಗಿಲ್ಲ. ವಾಸವಿರುವ ಮನೆಯ ಬಳಿಯೂ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. 10 ದಿನಗಳ ಹಿಂದೆಯೇ ಮಹಾಲಕ್ಷ್ಮಿ ಮೊಬೈಲ್ ಸಹ ಸ್ವಿಚ್ಆಫ್ ಆಗಿದೆ. ಹಾಗಾಗಿ 10 ದಿನಗಳ ಹಿಂದೆಯೇ ಕೊಲೆಯಾಗಿರುವ ಶಂಕೆ ಇದೆ.




