ಉತ್ತರ ಕನ್ನಡ ಜಿಲ್ಲೆಯಲ್ಲಿ ಹೂಡಿಕೆ ಮಾಡಲು ಸಿದ್ಧವಿರುವ 30ಕ್ಕೂ ಹೆಚ್ಚು ಕಂಪನಿಗಳಿಗೆ ಭೂಮಿ ಒದಗಿಸಲು ನಿರ್ಲಕ್ಷ್ಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಹೂಡಿಕೆದಾರರು ರಾಜ್ಯದಿಂದ ವಿಮುಖರಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಯುವಕರು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಹೂಡಿಕೆದಾರರ ಸಮಾವೇಶದಲ್ಲಿ ಸೂಟು ಬೂಟು ಹಾಕಿಕೊಂಡು 10 ಲಕ್ಷ ಕೋಟಿ ಬಂಡವಾಳ ಬರಲಿದೆ ಎಂದು ಬೊಗಳೆ ಜಾಹೀರಾತು ಕೊಟ್ಟುಬಿಟ್ಟರೆ ನಿಮಗೆ ಪುಕ್ಕಟೆ ಪ್ರಚಾರ ಸಿಗುವುದೇ ಹೊರತು ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ಆಗುವುದಿಲ್ಲ ಸಚಿವ ಸಚಿವ @MBPatil ಅವರೇ.
ಹೂಡಿಕೆದಾರರಿಗೆ ಅಗತ್ಯವಿರುವ ಭೂಮಿ, ಮೂಲಸೌಕರ್ಯ ಒದಗಿಸದರೆ ಮಾತ್ರ ರಾಜ್ಯಕ್ಕೆ ಹೊಸ ಕೈಗಾರಿಕೆಗಳು ಬರುತ್ತವೆ, ನಮ್ಮ ಯುವಕ ಯುವತಿಯರಿಗೆ ಉದ್ಯೋಗ ಸಿಗುತ್ತವೆ.
ಕ್ವಿನ್ ಸಿಟಿ, ಹೂಡಿಕೆದಾರರ ಸಮಾವೇಶ ಎಂದು ಬರೀ ತೋರಿಕೆ ಮಾಡುವುದು ಬಿಟ್ಟು, ಕೈಗಾರಿಕೆಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಬೇಕಾದ ಸೌಕರ್ಯ, ಅನುಕೂಲ ಒದಗಿಸುವ ಕಡೆ ಗಮನ ಕೊಡಿ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




