ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಅವಕಾಶ
ಚಿತ್ರದುರ್ಗ: 2025-26ನೇ ಸಾಲಿಗೆ ಬಿ.ಎಸ್‍ಸಿ ನರ್ಸಿಂಗ್ ಮತ್ತು ಜಿಎನ್‍ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಪೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸೇವಾಸಿಂಧು ವೆಬ್‍ಸೈಟ್ https://sevasindhu.karnataka.gov.in/sevasindhu/departmentservicesಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ.
ಅರ್ಹತೆಗಳು: ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕೋರ್ಸ್‍ನ ಅವಧಿ ಪೂರ್ಣಾವಧಿ. ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯ ಅನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ವಿದ್ಯಾರ್ಥಿಗಳು ಈ ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸಬೇಕು. ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸಿಡಿಂಗ್ ಆಗಿರುವ ಬಗ್ಗೆ ಹಾಗೂ ಎನ್‍ಪಿಸಿಐ ಮ್ಯಾಪಿಂಗ್ ಆ್ಯಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.




