ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ:29.03.2025ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.
ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ: ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 – ವೆಬ್ಸೈಟ್ https://kpp.karnataka.gov.in, ದೂರವಾಣಿ ಸಂಖ್ಯೆ: 080-22484516 / 22107704ಗೆ ಸಂಪರ್ಕಿಸಬಹುದು.





