ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು.



