ಚಾಮರಾಜನಗರ: ನಗರದ ಪ್ರತಿಷ್ಠಿತ ರಂಗವಾಹಿನಿ ಸಂಸ್ಥೆಯ ವತಿಯಿಂದ 13ನೇ ವರ್ಷದ ಮುಳ್ಳೂರು ನಾಗರಾಜ ರಾಜ್ಯಮಟ್ಟದ ಕಾವ್ಯ ಪ್ರಶಸ್ತಿಗೆ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕವನ ಸಂಕಲನ 2024ರಲ್ಲಿ ಪ್ರಕಟಗೊಂಡಿರಬೇಕು. ಪ್ರಶಸ್ತಿಯು 10,000 ರೂಪಾಯಿ ( ಹತ್ತು ಸಾವಿರ) ನಗದು, ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಪ್ರಶಸ್ತಿಯ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. 2025 ಏಪ್ರಿಲ್ ತಿಂಗಳ ಮೊದಲನೇ ವಾರ ಪ್ರಶಸ್ತಿ ಪ್ರದಾನ ಸಮಾರಂಭ ಮೈಸೂರಿನಲ್ಲಿ ನಡೆಯಲಿದೆ.
ಆಸಕ್ತರು ತಮ್ಮ ಭಾವಚಿತ್ರ ಮತ್ತು ಕಿರು ಪರಿಚಯದೊಂದಿಗೆ ಕವನ ಸಂಕಲನದ 4 ಪ್ರತಿಗಳನ್ನು ಸಿ.ಎಂ. ನರಸಿಂಹಮೂರ್ತಿ ಅಧ್ಯಕ್ಷರು, ರಂಗವಾಹಿನಿ(ರಿ) ಜಯದೇಗುಲ, 10ನೇ ಕ್ರಾಸ್, ಕೋರ್ಟ್ ಎದುರು, ಚಾಮರಾಜನಗರ – 571313 ಈ ವಿಳಾಸಕ್ಕೆ ಫೆಬ್ರವರಿ 26 ಒಳಗಾಗಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9916115263 ಸಂಪರ್ಕಿಸಬಹುದು.




