ಹಾಸನ: ರೈತರಿಗೆ, ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲರಿಗೂ ಪಶು ಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ತರಬೇತಿಯನ್ನು ಏರ್ಪಡಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ತರಬೇತಿಯಲ್ಲಿ ಭಾಗವಹಿಸುವ ಶಿಭಿರಾರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸ್ಟೈಫಂಡ್ ನೀಡಲಾಗುವುದಿಲ್ಲ.
ಆಸಕ್ತಿಯುಳ್ಳವರು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಎರಡು ಭಾವಚಿತ್ರ ಹಾಗೂ ಪರಿಶಿಷ್ಟ ಜಾತಿ / ಪಂಗಡಕ್ಕೆ ಸೇರಿದವರು ಜಾತಿ ಪ್ರಮಾಣ ಪತ್ರದೊಂದಿಗೆ ತರಬೇತಿ ಪ್ರಾರಂಭವಾಗುವ ದಿನಾಂಕದಂದು ಬೆಳಿಗ್ಗೆ 10.30 ಗಂಟೆಯೊಳಗೆ ಉಪ ನಿರ್ದೆಶಕರ ಕಛೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಸಂತೇಪೇಟೆ, ಹಾಸನದಲ್ಲಿ ಹಾಜರಾಗಬೇಕು.
ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಜೂನ್ 05 ಮತ್ತು 6ರಂದು, ರೈತರಿಗೆ ಆಧುನಿಕ ಕುರಿ ಮತ್ತು ಮೇಕೆ ಸಾಕಣಿಕೆ ತರಬೇತಿ ಜೂನ್ 17 ಮತ್ತು 18 ರಂದು, ರೈತರಿಗೆ ವೈಜ್ಞಾನಿ ಕೋಳಿ ಸಾಕಣಿಕೆ ತರಬೇತಿ ಜೂನ್ 20 ಮತ್ತು 21 ರಂದು ಇರುತ್ತದೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172-235226 ಸಂಪರ್ಕಿಸಹುದು.




