ವಿವಿಧ ಯೋಜನೆಗಳಿಗಾಗಿ ನಿಗಮ ಮಂಡಳಿಗಳಿಂದ ಅರ್ಜಿ ಆಹ್ವಾನ

2 years ago

#Invitation #applications #Corporation #Boards #various #schemes

ಧಾರವಾಡ: ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆ (ನೇರಸಾಲ), ಉದ್ಯಮ ಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ, ಭೂಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಹರಿಂದ 2023-24ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅರ್ಹರು ಸೇವಾಸಿಂಧು ಪೋರ್ಟಲ್ ಮೂಲಕ http://sevasindhu.karantaka.gov.in ರ ಕರ್ನಾಟಕ-ಒನ್, ಗ್ರಾಮ್-ಒನ್, ಹುಬ್ಬಳ್ಳಿ, ಧಾರವಾಡ- ಒನ್ಕೇಂ ದ್ರಗಳಲ್ಲಿ ಡಿಸೆಂಬರ್ 15, 2023ರೊಳಗೆ ಅರ್ಜಿಸಲ್ಲಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply