ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಮತ್ತು ಯೋಜನೆಗಳ ಬಗ್ಗೆ ಸಂಘ-ಸಂಸ್ಥೆಗಳ ಸಮನ್ವಯದೊಂದಿಗೆ ವಿವಿಧ ಗ್ರಾಮಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲು ಅರ್ಹ ಸ್ವಯಂ ಸೇವಾ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅರ್ಜಿಯನ್ನು ಡಿಸೆಂಬರ್ 10 ರೊಳಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ ಕಚೇರಿಗೆ ಸಲ್ಲಿಸಬೇಕು.
ಸ್ವಯಂ ಸೇವಾ ಸಂಘಸಂಸ್ಥೆಗಳಿಗೆ ಇರಬೇಕಾದ ಅರ್ಹತೆಗಳು: ಸ್ವಯಂ ಸೇವಾ ಸಂಘ ಸಂಸ್ಥೆಯು ನೊಂದಾಯಿತ ಸಂಸ್ಥೆಯಾಗಿದ್ದು ನೊಂದಣಿ ಚಾಲ್ತಿಯಲ್ಲಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ದಿಗಾಗಿ ಕನಿಷ್ಠ 5 ವರ್ಷಗಳ ಸೇವಾನುಭವ ಹೊಂದಿರಬೇಕು. ಪ್ರತಿ ವರ್ಷ ಆಡಿಟ್ ಮಾಡಿಸಿರಬೇಕು.




