ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಪ್ರಶಸ್ತಿ ಪ್ರದಾನ
ಧಾರವಾಡ: ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಅಭಿಮಾನಿ ಪ್ರಶಸ್ತಿ: ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ, ಅಂಕಣ, ಸಂಪಾದಕೀಯ, ಪರಿಣಾಮಕಾರಿ ವರದಿಗೆ ಅಭಿಮನ್ಯು ಪ್ರಶಸ್ತಿ: ಬೆಂಗಳೂರಿನ ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ಪ್ರಜಾ ಸಂದೇಶ ದತ್ತಿ ಪ್ರಶಸ್ತಿ ನೀಡಲಾಗುವುದು.
ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ.
2023 ನೇ ಸಾಲಿನ ಪ್ರಶಸ್ತಿಗಳು: 2023 ಜನವರಿಯಿಂದ ಡಿಸೆಂಬರ್-2023 ರವರೆಗೆ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಅಭಿಮಾನಿ ಪ್ರಶಸ್ತಿ-2023, ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ-2023 ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ಪ್ರಜಾ ಸಂದೇಶ ಪ್ರಶಸ್ತಿ-2023 ಹಾಗೂ ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ, ಅಂಕಣ, ಸಂಪಾದಕೀಯ, ಪರಿಣಾಮಕಾರಿ ವರದಿಗೆ ಅಭಿಮನ್ಯು ದತ್ತಿ ಪ್ರಶಸ್ತಿ -2023 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.
2024 ನೇ ಸಾಲಿನ ಪ್ರಶಸ್ತಿಗಳು: 2024 ಜನವರಿಯಿಂದ ಸೆಪ್ಟೆಂಬರ್ 2024 ರವರೆಗೆ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ, ವರದಿಗಳಿಗೆ ಅಭಿಮಾನಿ ಪ್ರಶಸ್ತಿ-2024, ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ ಮೈಸೂರು ದಿಗಂತ ಪ್ರಶಸ್ತಿ-2024 ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ಪ್ರಜಾ ಸಂದೇಶ ಪ್ರಶಸ್ತಿ-2024 ಹಾಗೂ ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ, ಅಂಕಣ, ಸಂಪಾದಕೀಯ, ಪರಿಣಾಮಕಾರಿಯಾದ ವರದಿಗೆ ಅಭಿಮನ್ಯು ಪ್ರಶಸ್ತಿ-2024 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.
ಕನ್ನಡ ದೈನಿಕ–ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರ್ತಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ, ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.
ಲೇಖನ-ವರದಿಗಳನ್ನು ಇದೇ ನವೆಂಬರ್ 20, 2024ರಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಭಿಮಾನಿ ಪ್ರಶಸ್ತಿ-2023, ಅಭಿಮಾನಿ ಪ್ರಶಸ್ತಿ-2024 ಹಾಗೂ ಮೈಸೂರು ದಿಗಂತ ಪ್ರಶಸ್ತಿ-2023, ಮೈಸೂರು ದಿಗಂತ ಪ್ರಶಸ್ತಿ-2024, ಪ್ರಜಾ ಸಂದೇಶ ಪ್ರಶಸ್ತಿ-2023, ಪ್ರಜಾ ಸಂದೇಶ ಪ್ರಶಸ್ತಿ-2024 ಹಾಗೂ ಅಭಿಮನ್ಯು ಪ್ರಶಸ್ತಿ -2023, ಅಭಿಮನ್ಯು ಪ್ರಶಸ್ತಿ-2024 ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001. ಇವರಿಗೆ ಕಳುಹಿಸಲು ಅಥವಾ kmaprashast@gmail.com ಗೆ ಇ – ಮೇಲ್ ಮೂಲಕ ಕಳುಹಿಸಲು ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




