ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಹಾಗೂ 2023ನೇ ಸಾಲಿನ ಜನವರಿ 01 ರಿಂದ ಡಿಸೆಂಬರ್31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುತ್ತಿದ್ದು, ಕೃತಿಗಳನ್ನು ಆಹ್ವಾನಿಸಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಆಸಕ್ತ ಲೇಖಕರು/ಪ್ರಕಾಶಕರು/ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜುಲೈ 20 ರೊಳಗಾಗಿ ತಲುಪುವಂತೆ ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಕಚೇರಿಯನ್ನು ಖುದ್ದಾಗಿ ಅಥವಾ ಅಥವಾ ದೂ.ಸಂ.: 080-22215509 ನ್ನು ಸಂಪರ್ಕಿಸಬಹುದು.




