ವಿವಿಧ ಯೋಜನೆಯಡಿಯಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ
ಬೆಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಶ್ರಮಶಕ್ತಿ ಸಾಲ/ ಸಹಾಯಧನ ಯೋಜನೆ , ಶ್ರಮ ಶಕ್ತಿ (ವಿಶೇಷ ಮಹಿಳಾ ಸಾಲ / ಸಹಾಯಧನ)ಯೋಜನೆ, ಟ್ಯಾಕ್ಸಿ / ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆ, ವೃತ್ತಿ ಪೋತ್ಸಾಹ ಸಾಲ / ಸಹಾಯಧನ ಯೋಜನೆ, ಕ್ರಿಶ್ಚಿಯನ್ ಸಮುದಾಯ ಆಧಾರಿತ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನ, ಅರಿವು (ವಿದ್ಯಾಭ್ಯಾಸ ಸಾಲ ಯೋಜನೆ) ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ / ನೇರಸಾಲ ಯೋಜನೆ ಮತ್ತು ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಸಕ್ತರು ವೆಬ್ ಸೈಟ್ www.kccdclonline.karnataka.gov.in ನಲ್ಲಿ ನವೆಂಬರ್ 30, 2025ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ ( ದಕ್ಷಿಣ ವಿಭಾಗ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್. 2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಾಣಿ ಸಂಖ್ಯೆ : 080-22114817, ಇ-ಮೇಲ್ kccdchelpline@gmail.com, ಸಹಾಯವಾಣಿ ಸಂಖ್ಯೆ : 6360753075 ಗೆ ಸಂಪರ್ಕಿಸಬಹುದು.




