ಶಿವಮೊಗ್ಗ: ತೋಟಗಾರಿಕೆ ಇಲಾಖೆಯ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೋಂದಣಿಗೆ ಸಂಬಂಧಿಸಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಿದ್ದು, ಜಿಲ್ಲೆಯಲ್ಲಿ ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಯೋಜನೆಯಡಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ರೈತರು ಬೆಳೆದಿರುವ ಅಡಿಕೆ ಬೆಳೆ ಕಂಡುಬರದಿದ್ದರೆ ಅಂತಹ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಬೆಳೆ ಸಮೀಕ್ಷೆ ಪ್ರಕಾರ ಹಿಂದಿನ ಎರಡು ವರ್ಷಗಳಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಥವಾ ಕನಿಷ್ಠ ಒಂದು ವರ್ಷದಲ್ಲಿಯಾದರೂ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ




