ಬಳ್ಳಾರಿ: ನಗರದ ಈದ್ಗಾ ರಸ್ತೆಯ ಹಿರಾಳ್‌ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ ಖಾಲಿ ಇರುವ ಅಡುಗೆ ತಯಾರಕ ಸಹಾಯಕ ಸಿಬ್ಬಂದಿ (1) ಹುದ್ದೆಗೆ ಪರಿಶಿಷ್ಟ ಜಾತಿ(ಎಸ್‌ಸಿ) ವರ್ಗದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಆಸಕ್ತ ಅರ್ಹ ಅಭ್ಯರ್ಥಿಗಳು ಅ.15 ರ ಸಂಜೆ 4.30ರೊಳಗಾಗಿ ಶಾಲೆಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಬೇಕಾದ ದಾಖಲೆ: ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಹಾಗೂ ಇತರೆ ದಾಖಲೆಗಳೊಂದಿಗೆ ಜೆರಾಕ್ಸ್ ಪ್ರತಿಗಳೊಂದಿಗೆ ರಿಜಿಸ್ಟರ್ ಪೋಸ್ಟ್ ಮೂಲಕ ಶಾಲೆಗೆ ಬಂದು ಅರ್ಜಿ ಸಲ್ಲಿಸಬೇಕು.
ಷರತ್ತುಗಳು: ಅಭ್ಯರ್ಥಿ ವಯೋಮಿತಿ 30 ರಿಂದ 50 ವರ್ಷ ಇರಬೇಕು. ಶಾಲೆ ಇರುವ ಸ್ಥಳದ ಖಾಯಂ ನಿವಾಸಿಯಾಗಿದ್ದು, ಕನಿಷ್ಠ ಏಳನೇ ತರಗತಿ ಉತ್ತೀರ್ಣಗೊಂಡಿರಬೇಕು. ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಬೇಕು. ಮಾಸಿಕ ಗೌರವ ಸಂಭಾವನೆ 3,600 ವೇತನವಿದ್ದು, ಖಾಯಂ ಹುದ್ದೆಯಾಗಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಗರದ ಈದ್ಗಾ ರಸ್ತೆಯ ಹಿರಾಳ್‌ಕುಡಂ ನ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಯ ಕಚೇರಿಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




