ದಾವಣಗೆರೆ: ದಾವಣಗೆರೆ ಉಪವಿಭಾಗದ ಮಟ್ಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು(ದೌರ್ಜನ್ಯ ಮತ್ತು ನಿಯಂತ್ರಣ) ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುರ್ನವಸತಿ ಅಧಿನಿಯಮ 2013ರ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗೆ ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ದೌರ್ಜನ್ಯ ನಿಯಂತ್ರಣ ಕಾಯ್ದೆಯ ಬಗ್ಗೆ ಅರಿವು ಹೊಂದಿರುವ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ವರ್ಗದ ಸರ್ಕಾರೇತರ ಸಂಸ್ಥೆಯಲ್ಲಿ (ಎನ್.ಜಿ.ಓ) ಸಕ್ರಿಯವಾಗಿ ಪಾಲ್ಗೊಂಡಿರುವ ವ್ಯಕ್ತಿಗಳು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುರ್ನವಸತಿ ಅಧಿನಿಯಮ 2013ರ ಸ್ಥಾನಕ್ಕೆ ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಏಳಿಗೆಗಾಗಿ ಸೇವೆ ಸಲ್ಲಿಸುತ್ತಿರುವ ಪರಿಶಿಷ್ಟ ಜಾತಿಯ ಆಸಕ್ತ ಪುರುಷ, ಮಹಿಳೆಯರು ಡಿ.26 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.




