ಧಾರವಾಡ: 2025-26ನೇ ಸಾಲಿನ ಮುಖ್ಯಮಂತ್ರಿಗಳ ಆಯವ್ಯಯ ಘೋಷಣೆಯಂತೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಕುರಿತ ಘೋಷಣೆಯಂತೆ ಧಾರವಾಡ ಜಿಲ್ಲೆ ಹುಬ್ಬಳ್ಳಿಯ ನೃಪತುಂಗ ಬೆಟ್ಟ ಪ್ರವಾಸಿ ತಾಣವನ್ನು ಐದು ಕೋಟಿಗಳ ಅಂದಾಜು ಮೊತ್ತದಲ್ಲಿ ವಿವಿಧ ಪ್ರವಾಸಿ ಸೌಲಭ್ಯ, ಕಾಮಗಾರಿಗಳನ್ನು ಅಭಿವೃದ್ಧಿಪಡಿಸಲು ನಿರ್ಣಯಿಸಲಾಗಿದೆ.
ಈ ಸಂಬಂಧ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಸಿದ್ದಪಡಿಸಬೇಕಾಗಿದೆ. ಕಾರಣ ಐದು ಕೋಟಿ ಮೀರದಂತೆ ಜಿಎಸ್ಟಿದ ಒಳಗೊಂಡ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಸಿದ್ದಪಡಿಸಿ ನೀಡಲು ಸಂಬಂಧಿಸಿದ ಅರ್ಹ ಸಂಸ್ಥೆ, ವ್ಯಕ್ತಿಗಳಿಂದ ಅಲ್ಪಾವಧಿ ದರಪಟ್ಟಿ ಆಹ್ವಾನಿಸಲಾಗಿದೆ.
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
ಆಸಕ್ತರು ತಮ್ಮ ದರಪಟ್ಟಿಯನ್ನು ಲಕೋಟೆಯಲ್ಲಿ ಅಕ್ಟೋಬರ್ 31, 2025 ರ ಸಂಜೆ 4 ಗಂಟೆಯೊಳಗೆ ಧಾರವಾಡ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2955522 ಗೆ ಸಂಪರ್ಕಿಸಬಹುದು.




