ದಾವಣಗೆರೆ: ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸುವ ಪರವಾನಿಗೆ ದರ ಪರಿಷ್ಕರಣೆ ಬಗ್ಗೆ ಆಕ್ಷೇಪಣೆ ಇದ್ದಲ್ಲಿ 30 ದಿನಗಳ ಒಳಗಾಗಿ ಮುಖ್ಯಾಧಿಕಾರಿ, ಪುರಸಭೆ, ಮಲೇಬೆನ್ನೂರು ರವರಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಏಪ್ರಿಲ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರುತ್ತದೆ ಎಂದು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.




