ಬೆಂಗಳೂರು: ಶಾಸಕ ಮುನಿರತ್ನ ಅವರ ಎಲ್ಲಾ ಅಪರಾಧ ಪ್ರಕರಣಗಳನ್ನೂ ಬಿಜೆಪಿಯ ಇತರೆ ನಾಯಕರೂ ಭಾಗಿಯಾಗಿದ್ದಾರ? ಇದೇ ಕಾರಣಕ್ಕೆ ಎಲ್ಲರೂ ಒಟ್ಟಾಗಿ ಮುನಿರತ್ನನನ್ನು ಉಳಿಸುವ ಕೆಲಸಕ್ಕೆ ಮುಂದಾಗಿದ್ದಾರ? ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅನುಮಾನ ವ್ಯಕ್ತಪಡಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುನಿರತ್ನ ತನ್ನನ್ನು ವಿಕಾಸಸೌಧ ಕಚೇರಿಯಲ್ಲೇ ಅತ್ಯಾಚಾರ ಮಾಡಿದ್ದಾರೆ. ಕೆಲವು ಅತ್ಯಾಚಾರ ಪ್ರಕರಣಗಳಿಗೆ ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಧೀಶರ ಎದುರು ಸೆಕ್ಷನ್ 164 ಅಡಿಯಲ್ಲಿ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಿದರು.
ಇದಲ್ಲದೆ, ರಾಜಕೀಯ ಹೊಂದಾಣಿಕೆ ಇಲ್ಲದ ಕಾರಣ ಅವರದ್ದೇ ಪಕ್ಷದಲ್ಲಿರುವ ಎದುರಾಳಿ ಕಾರ್ಪೊರೇಟರ್ ಪತಿಗೆ ಏಡ್ಸ್ ಸೋಂಕಿತ ಮಹಿಳೆಯ ಮೂಲಕ ಹನಿಟ್ರ್ಯಾಪ್ ಮಾಡಿಸಿ ಆತನಿಗೂ ಮಾರಕ ರೋಗ ಹರಡಿಸುವ ಯೋಜನೆ ರೂಪಿಸಿದ್ದಾರೆ. ಓರ್ವ ಐಎಎಸ್ ಅಧಿಕಾರಿ ಕೂಡ ಇವರ ಸಹಾಯ ತಗೊಂಡು ಮತ್ತೊಬ್ಬರನ್ನು ಹನಿಟ್ರ್ಯಾಪ್ ಮಾಡಲು ಮುಂದಾಗಿರುವ ಬಗ್ಗೆ ತನಿಖೆಯಿಂದ ಮಾಹಿತಿ ಹೊರಬಿದ್ದಿದೆ ಎಂದರು.
ಈತ ಎಷ್ಟು ಜನಕ್ಕೆ ಏಡ್ಸ್ ಹಬ್ಬಿಸಿದ್ದಾರೆ. ಎಷ್ಟು ಜನರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿದ್ದಾರೆ ಗೊತ್ತಿಲ್ಲ. ವಿಕಾಸಸೌಧದಲ್ಲೂ ಅತ್ಯಾಚಾರದಂತಹ ಗಂಭೀರ ಅಪರಾಧ ಎಸಗಿದ್ದಾರೆ. ಈ ಬಗ್ಗೆ ಸ್ವತಃ ಸಂತ್ರಸ್ಥೆ ನ್ಯಾಯಾಲಯದ ಎದುರು ಹೇಳಿಕೆ ದಾಖಲಿಸಿದ್ದಾರೆ. ಇವೆಲ್ಲಾ ಗಾಳಿಯಲ್ಲಿ ಗುಂಡು ಹಾರಿಸುವ ಹಿಟ್ ಅಂಡ್ ರನ್ ಹೇಳಿಕೆಗಳಲ್ಲ. ಇವೆಲ್ಲವೂ ಸಂತ್ರಸ್ತೆ ನ್ಯಾಯಾಲಯದ ಎದುರು ನೀಡಿರುವ ಹೇಳಿಕೆ ಎಂದರು.
ಆದರೆ, ಇಷ್ಟೆಲ್ಲಾ ಆಗಿದ್ರೂ ಮುನಿರತ್ನ ಅವರನ್ನು ಬಿಜೆಪಿ ಅಮಾನತು ಮಾಡಿದೆಯಾ? ಇದು ಅವರಿಗೆ ರಕ್ಷಣೆ ಹೌದ ಅಲ್ವ? ಸಂತ್ರಸ್ತೆ ನ್ಯಾಯಾಧೀಶರ ಎದುರು ನೀಡಿದ ಹೇಳಿಕೆಯೂ ಲೆಕ್ಕಕ್ಕೆ ಇಲ್ವ. ಮುನಿರತ್ನ ಅವರ ಎಲ್ಲಾ ಅಪರಾಧ ಕೆಲಸದಲ್ಲೂ ಬಿಜೆಪಿಯೂ ಭಾಗವಾಗಿರುವುದರಿಂದ ಬಿಜೆಪಿ ನಾಯಕರು ಅವರ ರಕ್ಷಣೆಗೆ ನಿಂತಿದ್ದಾರ? ಎಂದು ಪ್ರಶ್ನಿಸಿದರು.




