ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟಿಸಿರುವುದು ನಿಜವೇ?

2 years ago

#true #JDS #state #president #CMIbrahim #ousted #FactCheck

ಬೆಂಗಳೂರು: ಕಳೆದ ಎರಡು ದಿನಗಳಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯಿಂದ ಉಚ್ಛಾಟಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ಹರಿದಾಡುತ್ತಿದೆ. ಜೆಡಿಎಸ್ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ವಿಷಯದಲ್ಲಿ ಇಬ್ರಾಹಿಂ ಮತ್ತು ಪಕ್ಷದ ಹಿರಿಯ ನಾಯಕರ ನಡುವೆ ಮನಸ್ತಾಪ ಉಂಟಾಗಿದ್ದು, ಈ ಕುರಿತು ಜೆಡಿಎಸ್ ಸಮಾನ ಮನಸ್ಕರ ಸಭೆಯನ್ನು ಸಿ.ಎಂ.ಇಬ್ರಾಹಿಂ ಬೆಂಗಳೂರಿನಲ್ಲಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಇಬ್ರಾಹಿಂ ಅವರನ್ನು ಉಚ್ಛಾಟಿಸಲಾಗಿದೆ ಎಂಬ ಪತ್ರ ಹರಿದಾಡತೊಡಗಿದೆ. ಇದಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಸಹಿ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ ವಾಸ್ತವದಲ್ಲಿ ಇದು ನಕಲಿ ಪತ್ರವಾಗಿದೆ.

Leave a Reply