ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಸಂಘ ಪರಿವಾರದ ಆಳ ಅಗಲ ಅಷ್ಟೇ ಅಲ್ಲ, ಅದರ ಸುತ್ತಳತೆಯನ್ನೂ ಬಲ್ಲೆ Vijayendra Yediyurappa ಅವರೇ..
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಆರ್.ಎಸ್.ಎಸ್. ನೂರು ವರ್ಷಗಳಲ್ಲಿ ನಡೆಸಿರುವ ಸಮಾಜ ಸೇವೆಯ ಎಣಿಕೆಯ ಲೆಕ್ಕ ನಂತರ ಕೊಡುವಿರಂತೆ, ಸಂಘ ನಡೆಸಿದ ಸಮಾಜ ಘಾತುಕ ಕೃತ್ಯಗಳ ದಾಖಲೆಗಳೇ ಹೇಳುವ ಲೆಕ್ಕ ಗೊತ್ತಾ? ಸಮಾಜ ಸೇವೆ ಎಂಬುವುದು ಕೇವಲ ಮುಖವಷ್ಟೇ, ಅದರ ಹಿಂದಿನ ಮುಖವಾಡಗಳು ಸಂವಿಧಾನಬಾಹಿರ ಚಟುವಟಿಕೆಗಳಿಗೆ ಲೆಕ್ಕವಿಲ್ಲ. ಅಗೆದಷ್ಟು, ಬಗೆದಷ್ಟು ಕರಾಳವಾಗಿದೆ.
ಆರ್.ಎಸ್.ಎಸ್ ಶಾಖೆಯಲ್ಲಿ ಮಾತ್ರ ಪ್ರವೇಶ ಇರುವ ವಿಜಯೇಂದ್ರ ಅವರೇ ಸಂಘವನ್ನು ಸಮರ್ಥಿಸುವ ಮೊದಲು ನನ್ನ ಪ್ರಶ್ನೆಗೆ ಉತ್ತರಿಸುವ ಧೈರ್ಯ ಮಾಡಿ.
ಮೂಲಭೂತವಾಗಿ ಆರ್.ಎಸ್.ಎಸ್. ಎನ್ನುವುದು ಏನು? ಅದೊಂದು ಸಾಂಸ್ಕೃತಿಕ ಸಂಘಟನೆಯೇ? ಸಾಮಾಜಿಕ ಸೇವಾ ಸಂಸ್ಥೆಯೇ? ಸಾರ್ವಜನಿಕ ದತ್ತಿಯೇ? ಗುಪ್ತ ರಾಜಕೀಯ ಉದ್ದೇಶ ಹೊಂದಿರುವ ಕಾರ್ಯಕರ್ತರ ಕೂಟವೇ? ಇಲ್ಲವೇ, ಕೇವಲ ಹಿಂದೂ ಸಂಘಟನೆಯೇ?
ಸಮಾಜ ಸೇವೆಯ ಮುಖ ಹೊತ್ತಿರುವ ಆರ್.ಎಸ್.ಎಸ್. ನೋಂದಣಿ ಸಂಘಟನೆಯೇ? ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಸಂಘಟನೆಯ ಹಣದ ಮೂಲ ಯಾವುದು? ಜನರು ನೀಡುವ ದೇಣಿಗೆಯ ಲೆಕ್ಕಪತ್ರ ಒಮ್ಮೆಯಾದರೂ ಬಹಿರಂಗಗೊಳಿಸಿದ್ದೀರಾ? ಚೆಕ್ ಮೂಲಕ ಲಂಚ ಪಡೆಯುವ ನಿಮಗೆ ಸಂಘದ ಲೆಕ್ಕಪತ್ರ ಕೇಳುವ ಧೈರ್ಯ ಎಲ್ಲಿಂದ ಬರಬೇಕು ಬಿಡಿ.
ಹಿಂದೂ ನಾವೆಲ್ಲ ಒಂದು ಎನ್ನುತ್ತಲೇ ಚಾತುರ್ವರ್ಣ ವ್ಯವಸ್ಥೆಯನ್ನು ಪಾಲಿಸುವ ಸಂಘಕ್ಕೆ ಹಿಂದೂ ಎನ್ನುವುದು ಕೇವಲ ರಾಜಕೀಯದ ಲಾಭ ಪಡೆಯಲು ಬಳಸುವ ಆಯುಧ ಅಷ್ಟೇ. ನಮಗೆ ರಾಜಕೀಯ ಎದುರಾಳಿ ಬಿಜೆಪಿ ಅಲ್ಲವೇ ಅಲ್ಲ, ರಾಜಕೀಯದ ಮುಖವಾಡ ಹೊಂದಿರುವ ಆರ್.ಎಸ್.ಎಸ್. ನಮ್ಮ ಸೈದ್ಧಾಂತಿಕ ವಿರೋಧಿ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ. ಆರ್.ಎಸ್.ಎಸ್ ಬಗ್ಗೆ ಮಾತಾಡುವುದಕ್ಕೆ ಧೈರ್ಯ ಮಾತ್ರವಲ್ಲ, ಪ್ರಮಾಣಿಕತೆಯೂ ಇದೆ. ಅದರ ಹಿಡನ್ ಅಜೆಂಡಾಗಳನ್ನ ಸ್ಷಷ್ಟವಾಗಿ ಅರಿತಿದ್ದೇನೆ. ಸಂಘದ ಬಗ್ಗೆ ಮಾತಾಡಲು ಪ್ರೇರೇಪಿಸಿ ನನ್ನ ಮುಂದೆ ಸೈದ್ದಾಂತಿಕವಾಗಿ ಬೆತ್ತಲಾಗಬೇಡಿ. ರಾಜಕೀಯದ ಎಳಸುಗಾರಿಕೆ ಬಿಟ್ಟು ಒಂದಿಷ್ಟು ಪ್ರಬುದ್ಧತೆಗೆ ತೆರೆದುಕೊಳ್ಳಿ.
– ಬಿ ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ


