ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಕೇರಳ ಸಿಎಂ? ಅಥವಾ ಕನ್ನಡಿಗರ ಸಿಎಂ? ಎನ್ನುವ ಬಗ್ಗೆ ರಾಜ್ಯದ ಜನರಿಗೆ ಅನುಮಾನ ಮೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುವರ್ಣಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಳೆಗೆ ನಮ್ಮ ರಾಜ್ಯದಲ್ಲಿ ಅನೇಕ ಬಡವರು ಮನೆ ಕಳೆದುಕೊಂಡಿದ್ದಾರೆ. ಅವರಿಗೆ 1 ಲಕ್ಷ ರೂ. ಪರಿಹಾರವನ್ನೂ ಕೊಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಆದರೆ ಗಾಂಧಿ ಕುಟುಂಬವನ್ನು ಖುಷಿ ಪಡಿಸಲು, ಕೇರಳ ರಾಜ್ಯದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಖುಷಿ ಪಡಿಸಲು ಅಲ್ಲಿ ಬಡವರಿಗೆ ಮನೆ ಕಟ್ಟಿಸುವುದಾಗಿ ಹೇಳಿದ್ದಾರೆ ಎಂದು ಕಿಡಿಕಾರಿದರು.
ಇದರ ಜೊತೆಗೆ ಕೇರಳ ಉಪಚುನಾವಣೆ ಪ್ರಚಾರದ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವುದಾಗಿ ಹೇಳಿಕೆ ನೀಡಿದ್ದರು. ಇದು ಸರಿಯಲ್ಲ. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ತೀರ್ಮಾನ ಆಗಿದೆ. ಸಿಎಂ ಹಾಗೂ ಡಿಸಿಎಂ ರಾಜ್ಯದ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಈ ವಿಚಾರವನ್ನೂ ಸದನದಲ್ಲಿ ಪ್ರಸ್ತಾಪಿಸುತ್ತೇವೆ. ಈ ಬಗ್ಗೆ ಪತ್ರವನ್ನೂ ಬರೆಯುತ್ತಿದ್ದೇನೆ ಎಂದರು.
ಸಿಎಂ ಸಿದ್ದರಾಮಯ್ಯ ಅಧಿಕಾರದ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ. ಮೀಸಲಾತಿ ಹೋರಾಟ ಕೈಗೊಂಡಾಗ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಲು ಏನು ದಾಡಿಯಾಗಿತ್ತು. ಪ್ರತಿಭಟನಾಕಾರರ ಬಳಿ ಹತ್ತು ಹೆಜ್ಜೆ ಹೋಗಿ ಭೇಟಿ ಮಾಡಲು ಏಕೆ ಆಗಿಲ್ಲ? ಸಿಎಂ ಇಲ್ಲೇ ಸುವರ್ಣಸೌಧದಲ್ಲಿ ಇದ್ದಗಾಲೂ ಸ್ವಾಮೀಜಿಯನ್ನು ಭೇಟಿಯಾಗುವ ವ್ಯವಧಾನ ತೋರಿಲ್ಲ. ಸರ್ಕಾರ ಚೆನ್ನಮ್ಮನ ನಾಡಿನಲ್ಲಿ ರಕ್ತ ಹರಿಸುವ ಕೆಲಸ ಮಾಡಿದೆ. ಯಾವ ಕಾರಣಕ್ಕೆ ಲಾಠಿ ಪ್ರಹಾರ ಮಾಡಿದೆ? ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಅಮಾಯಕರ ಮೇಲೆ ಲಾಠಿ ಪ್ರಹಾರ ಮಾಡಿದ್ದಾರೆ. 138 ಶಾಸಕರು ಇದ್ದೇವೆ. ಮುಂದೆ ನಾವೇ ಅಧಿಕಾರದಲ್ಲಿ ಇರುತ್ತೇವೆ ಎಂಬ ಭ್ರಮೆಯಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದರು.




