ಬೆಂಗಳೂರು: ಅನುದಾನ ಹಂಚಿಕೆ ಸೇರಿದಂತೆ ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನಿರಂತರ ಅನ್ಯಾಯವಾಗುತ್ತಿದೆ. ಇತರ ವಿರುದ್ಧ ನಾವು ಎಚ್ಚೆತ್ತು ಪ್ರಶ್ನೆ ಮಾಡದೆ ಹೋದರೆ ಮುಂದಿನ ಬಜೆಟ್ನಲ್ಲೂ ಈ ಸಮುದಾಯಗಳಿಗೆ ನ್ಯಾಯ ಸಿಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಎಸ್ಸಿ ಎಸ್ಪಿ, ಟಿಎಸ್ಪಿ ಹಣ ದುರ್ಬಳಕೆ ಮಾಡಿಕೊಂಡಿದ್ದು ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸುವ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಬಜೆಟ್ ನಲ್ಲಿಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಗೆ 39,914 ಕೋಟಿ ಘೋಷಿಸಿದ್ದರು. ಆದರೆ, 23,485 ಕೋಟಿ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ 20,404 ಕೋಟಿ ಮಾತ್ರ ವೆಚ್ಚವಾಗಿದೆ. ಅವರಿಗೆ ಮೀಸಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿದ್ದಾರೆ. ಸರ್ಕಾರದ ಇಂತಹ ಕ್ರಮದ ವಿರುದ್ಧ ಬಿಜೆಪಿ ಹೋರಾಟ ನಡೆಸಬೇಕು ಎಂದರು.
ಬಿಜೆಪಿ ಪರಿಶಿಷ್ಟ ಸಮುದಾಯಗಳ ಧ್ವನಿಯಾಗಿ ಗಟ್ಟಿಯಾದ ಹೋರಾಟ ರೂಪಿಸಬೇಕಿದೆ. ಪಕ್ಷ ಸ್ವಂತ ಶಕ್ತಿಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು, ಶೋಷಿತ ಜನರ ಪರವಾಗಿ ನಾವು ಧ್ವನಿ ಎತ್ತುವುದು ಅನಿವಾರ್ಯ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಅಹಿಂದ ಉದ್ಧಾರಕರೆಂದು ಹೇಳಿಕೊಳ್ಳುತ್ತಾರೆ. ಆದರೆ, ಪರಿಶಿಷ್ಟ ಜಾತಿ, ಪಂಗಡಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದರು.
ನೀರಾವರಿ, ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆದಾರರಿಗೆ ನೀಡಬೇಕಿರುವ ಬಾಕಿ ₹6 ಸಾವಿರ ಕೋಟಿ ಇದೆ. ಸರ್ಕಾರದಲ್ಲಿ ಹಣದ ಕೊರತೆ ಇಲ್ಲ ಎನ್ನುವ ಮುಖ್ಯಮಂತ್ರಿ, ಬಾಕಿ ಹಣ ಏಕೆ ಬಿಡುಗಡೆ ಮಾಡುತ್ತಿಲ್ಲ? ನೌಕರರಿಗೆ ವೇತನ ನೀಡಲು ಆಗದಷ್ಟು ಸರ್ಕಾರದ ಖಜಾನೆ ಖಾಲಿಯಾಗಿದೆಯೇ ಎಂದು ಪ್ರಶ್ನಿಸಿದರು.




