ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಮಾಡಿರುವ @INCKarnataka ಸರ್ಕಾರ, ಕೆಪಿಸಿಸಿ ವಕ್ತಾರ ಶ್ರೀ @RameshBabuKPCC ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಾಮಚಂದ್ರಪ್ಪ ಅವರುಗಳನ್ನ ಸಮಿತಿಯಲ್ಲಿ ನೇಮಕ ಮಾಡಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಸಿಎಂ @siddaramaiah ನವರೇ, ಜಾಹೀರಾತುಗಳನ್ನ ಪರಿಶೀಲನೆ ಮಾಡಲು ತಮ್ಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ?
ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನ ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹಿರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು.
ಅದು ಬಿಟ್ಟು ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ? ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.
ಈ ನಡೆಯ ಹಿಂದೆ ಮಾಧ್ಯಮಗಳನ್ನ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆಯೇ?
– ಆರ್, ಅಶೋಕ್, ವಿಧಾನಸಭೆ ವಿಪಕ್ಷ ನಾಯಕ



