ಬೆಂಗಳೂರು: ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು ಮತ್ತೊಂದು ಅವರಿಗೆ ಪಕ್ಷವನ್ನು ಮುನ್ನಡೆಸುವುದು ಬಹುತೇಕ ಖಚಿತವಾಗಿದೆ.
ಈ ಮಾಸಾಂತ್ಯದ ವೇಳೆಗೆ ಅಥವಾ ಮುಂದಿನ ತಿಂಗಳ ಮೊದಲ ವಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ನೇಮಕ ಮಾಡಿರುವ ಕುರಿತು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ಕರ್ನಾಟಕದ ಎಲ್ಲಾ 39 ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಈ ಎಲ್ಲ ಅಧ್ಯಕ್ಷರು ವಿಜಯೇಂದ್ರ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ, ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ವಿಜಯೇಂದ್ರ ಸ್ಪಷ್ಟ ಮೇಲುಗೈ ಸಾಧಿಸಿದ್ದಾರೆ. ರಾಜ್ಯಾಧ್ಯಕ್ಷರ ನೇಮಕಕ್ಕೆ ಇದು ಬಹುಮುಖ್ಯವಾದ ಪ್ರಕ್ರಿಯೆಯಾಗಿದೆ. ಹೀಗಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದರೂ ಕೂಡ ವಿಜಯೇಂದ್ರ ಭಾರೀ ಬಹುಮತದೊಂದಿಗೆ ಆಯ್ಕೆಯಾಗುವ ಸಾಧ್ಯತೆ ಇದೆ.
ಈ ಕುರಿತಂತೆ ಸಮಗ್ರ ವರದಿಯನ್ನು ಪಡೆದುಕೊಂಡಿರುವ ಹೈಕಮಾಂಡ್ ಇದೀಗ ವಿಜಯೇಂದ್ರ ಅವರಿಗೆ ಮತ್ತೊಂದು ಅವಕಾಶ ನೀಡಲು ತೀರ್ಮಾನಿಸಿದೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಉನ್ನತ ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕಕ್ಕೆ ಬಂದು ಅಧಿಕೃತ ಘೋಷಿಸಲಿದ್ದಾರೆ. ಇದು ಬಹಳ ಹಿಂದೆಯೇ ಆಗಬೇಕಾಗಿತ್ತು. ಆದರೆ ಕರ್ನಾಟಕ ಬಿಜೆಪಿ ಘಟಕದಲ್ಲಿ ಮನೆಯೊಂದು ಹಲವು ಬಾಗಿಲುಗಳು ಇರುವ ಹಿನ್ನಲೆಯಲ್ಲಿ ಬಿಜೆಪಿ ವರಿಷ್ಠರು ಅಳೆದುತೂಗಿ ಘೋಷಣೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.
ದಕ್ಷಿಣದ ರಾಜ್ಯದಲ್ಲಿ ಬಿಜೆಪಿ ಬಲಿಷ್ಠ ಎಂದು ಇರುವುದು ಕರ್ನಾಟಕದಲ್ಲಿ. ಹಾಗಾಗಿ, ಇರುವ ಹಿಡಿತವನ್ನು ಕಳೆದುಕೊಳ್ಳಲು ಅಮಿತ್ ಶಾ ಮತ್ತು ನರೇಂದ್ರ ಮೋದಿ ಸಿದ್ಧರಿಲ್ಲ. ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆಯಲ್ಲೂ ವಿಜಯೇಂದ್ರ ಮೇಲುಗೈ ಸಾಧಿಸಿದ್ದರು. ಈ ಎಲ್ಲಾ ಅಂಶಗಳನ್ನು ಆಧರಿಸಿ ವಿಜಯೇಂದ್ರ ಅವರಿಗೆ ಮತ್ತೊಂದು ಅವಕಾಶ ನೀಡಲು ತೀರ್ಮಾನಿಸಿದ್ದಾರೆ.




