ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡೂವರೆ ವರ್ಷ ಅಧಿಕಾರವಧಿ ಪೂರ್ಣಗೊಳಿಸುತ್ತಿರುವ ಬೆನ್ನಲ್ಲೇ ಅಧಿಕಾರ ಹಸ್ತಾಂತರ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅದರಲ್ಲೂ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ ಕೆ ಶಿವಕುಮಾರ್ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡುತ್ತಾ, ನಾಯಕತ್ವದ ಬಗ್ಗೆ ಶಾಸಕರ ಅಭಿಪ್ರಾಯ ಏನೇ ಇರಲಿ, ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಹೇಳಿದ ವಿಚಾರ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಮಂತ್ರಿ ಪ್ರಿಯಾಂಕ್ ಖರ್ಗೆ, ನಾಯಕತ್ವದ ವಿಚಾರಕ್ಕೆ ಬಂದಾಗ ಹೈಕಮಾಂಡ್ ನವರು ಯಾವುದೇ ತೀರ್ಮಾನ ಮಾಡುವಾಗ ಎಲ್ಲ ಶಾಸಕರನ್ನು ಕೇಳಿಯೇ ತೆಗೆದುಕೊಳ್ಳುತ್ತಾರೆ. ಶಾಸಕರ ಪಲ್ಸ್, ಅಭಿಪ್ರಾಯ ತಿಳಿದುಕೊಳ್ಳದೆ ಹೈಕಮಾಂಡ್ ನಿರ್ಧಾರ ಮಾಡಲ್ಲ ಎಂದಿದ್ದಾರೆ.
ಹೈಕಮಾಂಡ್ ನವರು ಮೊದಲು ವೀಕ್ಷಕರನ್ನು ರಾಜ್ಯಗಳಿಗೆ ಕಳುಹಿಸಿ ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ಅದನ್ನು ಹೈಕಮಾಂಡ್‌ಗೆ ತಲುಪಿಸುತ್ತಾರೆ. ಕೆಲವೊಮ್ಮೆ ಸಂಖ್ಯೆ ಹೆಚ್ಚು ಇರಬಹುದು, ಕಡಿಮೆ ಇರಬಹುದು. ಆಗ ಪರಿಸ್ಥಿತಿ, ವಾತಾವರಣ ಏನಿದೆ? ಯಾವ ತೀರ್ಮಾನ ಮಾಡಿದರೆ ಪಕ್ಷಕ್ಕೆ ಒಳ್ಳೆಯದು ಎಂದು ತಿಳಿದುಕೊಂಡು ಹೈಕಮಾಂಡ್ ಬುದ್ದಿವಂತಿಕೆಯಿಂದ ಅಂತಿಮ ತೀರ್ಮಾನ ಮಾಡಲಿದೆ ಎಂದರು.




