ಚಿನ್ನಾಭರಣ ವ್ಯಾಪಾರಿಗಳ ಮೇಲೆ ಐಟಿ ದಾಳಿ

3 years ago

ಬೆಂಗಳೂರು: ಸುಳ್ಳು ಲೆಕ್ಕ,ತೆರಿಗೆ ವಂಚನೆ ಮೊದಲಾದ ಆರ್ಥಿಕ ಅಪರಾಧಗಳ ದೂರುಗಳ ಹಿನ್ನೆಲೆಯಲ್ಲಿ ಖಚಿತ ಮಾಹಿತಿಯನ್ನು ಕಲೆ ಹಾಕಿದ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಬೆಂಗಳೂರಿನಲ್ಲಿ ಚಿನ್ನಾಭರಣ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ.

ತೆರಿಗೆ ವಂಚನೆ ಮಾಡಿ ವ್ಯಾಪಾರ ಮಾಡುತ್ತಿದ್ದ ಆರೋಪದಲ್ಲಿ ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣಗಳ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಚಿನ್ನದಂಗಡಿಗಳು ಹೆಚ್ಚಾಗಿರುವ ಮಲ್ಲೇಶ್ವರಂ ಜಯನಗರ, ಯಶವಂತಪುರ,ಬಸವನಗುಡಿ, ಚಿಕ್ಕಪೇಟೆ ನಗರದಲ್ಲಿನ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.

ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ ದೂರುಗಳ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ ಸುಮಾರು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪ್ರದೇಶದಲ್ಲಿ ನಡೆದಿರುವ ದಾಳಿಯಲ್ಲಿ ಪಾಲ್ಗೊಂಡಿದ್ದರು.

ತಂಡ ತಂಡವಾಗಿ ಅಧಿಕಾರಿಗಳು ಚಿನ್ನಾಭರಣಗಳ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದ್ದು,ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

Leave a Reply