ಬೆಂಗಳೂರು: ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಐಟಿ ಇಲಾಖೆ ಅಧಿಕಾರಿಗಳು ರಾಜ್ಯದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ಪ್ರೆಸ್ಟೀಜ್ ಸಂಸ್ಥೆಗೆ ಬಿಸಿ ಮುಟ್ಟಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮೊದಲಿಗೆ ಬೆಂಗಳೂರಿನ ಎಂಜಿ ರಸ್ತೆಯಲ್ಲಿನ ಪ್ರೆಸ್ಟೀಜ್ ಗ್ರೂಪ್ ಮುಖ್ಯ ಕಚೇರಿ ಸೇರಿದಂತೆ ನಗರದ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಸುಮಾರು 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಪ್ರೆಸ್ಟೀಜ್ ಗ್ರೂಪ್ ಮುಖ್ಯ ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿಏಕಕಾಲಕ್ಕೆ ದಾಳಿ ನಡೆಸಿದರು.
ಈ ವೇಳೆ ಜಾಮೀನು ಖರೀದಿ ಕುರಿತು ಅಪಾರ ಪ್ರಮಾಣದ ದಾಖಲೆ ಮತ್ತು ಜಂಟಿ ಸಹಭಾಗಿತ್ವದಲ್ಲಿ ಕೈಗೊಳ್ಳುತ್ತಿರುವ ನಿರ್ಮಾಣ ಯೋಜನೆಗಳ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.
ಪ್ರೆಸ್ಟೀಜ್ ಗ್ರೂಪ್ನಿಂದ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಿರ್ಮಾಣ ಸೇರಿ ಹಲವು ಉದ್ಯಮಗಳನ್ನು ಹೊಂದಿದೆ.




